ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ (ಎಂಸಿಡಿ) ಸದನದಲ್ಲಿ ಎಎಪಿ ಮತ್ತು ಬಿಜೆಪಿ ಕೌನ್ಸಿಲರ್ ಗಳ ನಡುವೆ ಘರ್ಷಣೆ; ಹಲ್ಲೆ
ಎಎಪಿ ಮತ್ತು ಬಿಜೆಪಿ ಕೌನ್ಸಿಲರ್ ಗಳ ನಡುವೆ ರಾಷ್ಟ್ರರಾಜಧಾನಿ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ (ಎಂಸಿಡಿ) ಸದನದಲ್ಲಿ ಮತ್ತೆ ಘರ್ಷಣೆ ನಡೆದಿದೆ. ಪ್ರಮುಖ ಆರು ಸದಸ್ಯರ ಸ್ಥಾಯಿ ಸಮಿತಿಗೆ ಚುನಾವಣೆಯ ನಡೆದಿತ್ತು. ಮೇಯರ್ ಶೆಲ್ಲಿ ಒಬೆರಾಯ್ ಒಂದು ಮತವನ್ನು ಅಸಿಂಧುಗೊಳಿಸುತ್ತಿದ್ದಂತೆಯೇ ಉಭಯ ಪಕ್ಷಗಳ ಕೌನ್ಸಿಲರ್ ಗಳು ಕೂಗಾಟದ ನಡುವೆ ಪರಸ್ಪರ ತಳ್ಳಾಟ, ನೂಕಾಟ ನಡೆದು ಹೊಡೆದಾಡಿಕೊಂಡಿದ್ದಾರೆ.
ಗದ್ದಲದ ವೇಳೆ ಎಂಸಿಡಿ ಸದನದ ಕಲಾಪವನ್ನು ಫೆ.27ರವರೆಗೂ ಮುಂದೂಡುವಂತೆ ಒತ್ತಾಯಿಸುತ್ತಿದ್ದಾಗ ಕೌನ್ಸಿಲರ್ ಅಶೋಕ್ ಮನು ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.ಚುನಾವಣೆಯಲ್ಲಿ ನಮ್ಮ ಪಕ್ಷ ಸೋಲುತ್ತದೆ ಎಂದು ಭಾವಿಸಿ ಬಿಜೆಪಿ ಕೌನ್ಸಿಲರ್ ಗಳು ದೆಹಲಿ ಮೇಯರ್ ಮೇಲೆ ಹಲ್ಲೆ ನಡೆಸಿದ್ದು, ಅವರು ಸದನದಿಂದ ಹೊರ ಹೋಗುವಂತೆ ಮಾಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಶಾಸಕಿ ಆರೋಪಿಸಿದ್ದಾರೆ.
ಫೆಬ್ರವರಿ 23 ರಂದು ನಡೆದ ಚುನಾವಣೆಯಲ್ಲಿ ಇದೇ ರೀತಿಯ ಘಟನೆ ನಡೆದಿತ್ತು.

Post a Comment