ಉಡುಪಿ:- ಸ್ಕೂಟಿ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದ ಛಾಯಾಗ್ರಾಹಕ ಮೃತ್ಯು
ಕಾಪು ವಲಯದ ಮಾಜಿ ಕ್ರೀಡಾ ಕಾರ್ಯದರ್ಶಿಗಳಾಗಿ ಬಹಳ ಉತ್ಸಾಹದಿಂದ ಕೆಲಸ ನಿರ್ವಹಿಸಿದ್ದ ಛಾಯಾಗ್ರಾಹಕರಾದ ಪ್ರೀತೇಶ್ ಕಾಪು ಅವರು ಸ್ಕೂಟಿ ಸ್ಕಿಡ್ ಆಗಿ ಬಿದ್ದು ತೀವ್ರ ಗಾಯಗೊಂಡು ಅಪಘಾತದಿಂದಾಗಿ 5 ದಿನಗಳಿಂದ ಅಜ್ಜರ ಕಾಡು ಆಸ್ಪತ್ರೆಯಲ್ಲಿ ಜೀವನ್ಮರಣ ಸ್ತಿತಿಯಲ್ಲಿ ಬದುಕಿಗಾಗಿ ಹೋರಾಡುತ್ತಿದ್ದು ಇಂದು ಬೆಳಿಗ್ಗೆ ೪ ಗಂಟೆಗೆ ಅವರು ಚಿಕಿತ್ಸೆ ಫಲಕಾರಿಯಾಗದೆ ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತರು ತಂದೆ, ತಾಯಿ, ಪತ್ನಿ ಮತ್ತು ಮೂರು ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ. ಪ್ರೀತೇಶ್ ಛಾಯಾಚಿತ್ರಗ್ರಾಹಕ ವೃತ್ತಿಯ ಬಿಡುವಿನ ವೇಳೆ ಮಲ್ಪೆಗೆ ಮೀನುಗಾರಿಕೆಗೆ ತೆರಳುತ್ತಿದ್ದು, ಫೆ. 4ರಂದು ಸಂಜೆ ಪಡುಕರೆ – ಕಾಪು ರಸ್ತೆಯಲ್ಲಿ ಸ್ನೇಹಿತ ಪ್ರಶಾಂತ್ ಕುಮಾರ್ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿತ್ತು. ರಸ್ತೆಗೆ ಬಿದ್ದು ತಲೆಗೆ ಗಂಭೀರ ಏಟಾಗಿ, ಪ್ರಜ್ಞೆ ತಪ್ಪಿ ಬಿದ್ದಿದ್ದ ಪ್ರಿತೇಶ್ ಮತ್ತು ಸಣ್ಣ ಪುಟ್ಟ ಗಾಯಗೊಂಡಿದ್ದ ಪ್ರಶಾಂತ್ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ವೈದ್ಯರ ಸೂಚನೆಯಂತೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸಾ ವೆಚ್ಚ ಹೆಚ್ಚಿದ ಪರಿಣಾಮ ಅಲ್ಲಿಂದ ಮತ್ತೆ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಐದು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Post a Comment