ಕಾರ್ಕಳ:- ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿಗೆ ಜೀವಾವಧಿ ಶಿಕ್ಷೆ
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3 ವರ್ಷಗಳ ಹಿಂದೆ ನಡೆದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೋ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯವು ಜೀವಾವಧಿ ಜೈಲುಶಿಕ್ಷೆ ವಿಧಿಸಿದೆ.
ಬೆಳ್ತಂಗಡಿ ತಾ| ವೇಣೂರು ನಿವಾಸಿ ರಾಧಾಕೃಷ್ಣ ಆಚಾರ್ಯ (26) ಶಿಕ್ಷೆಗೆ ಗುರಿಯಾದ ಆರೋಪಿ. ಆತ 17 ವರ್ಷ ಪ್ರಾಯದ ಬಾಲಕಿಯನ್ನು 2019ರಲ್ಲಿ ಇನ್ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡು ಎಪ್ರಿಲ್ ತಿಂಗಳಲ್ಲಿ ಬಾಲಕಿಯ ಮನೆಗೆ ಯಾರೂ ಇಲ್ಲದ ವೇಳೆ ಬಂದಿದ್ದು, ಸಲುಗೆಯಿಂದ ಮಾತನಾಡಿ ಬಲತ್ಕಾರವಾಗಿ ದೈಹಿಕ ಲೈಂಗಿಕ ದೌರ್ಜನ್ಯ ಎಸಗಿದ್ದ. ಅನಂತರ ಬೆದರಿಕೆ ಹಾಕಿದ್ದ. ಇದರಿಂದ ನೊಂದ ಬಾಲಕಿ ಗರ್ಭಿಣಿಯಾಗಿದ್ದು, ಈ ಬಗ್ಗೆ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಅದರಂತೆ ನೊಂದ ಬಾಲಕಿಯ ತಾಯಿ ನೀಡಿದ ದೂರಿನಂತೆ ಎಸ್ಸಿಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿಯೂ ಪ್ರಕರಣ ದಾಖಲಾಗಿತ್ತು. ಉಡುಪಿ ಡಿವೈಎಸ್ಪಿ ತನಿಖೆ ನಡೆಸಿದ್ದು, ಕಾರ್ಕಳ ಎಎಸ್ಪಿ ಪಿ. ಕೃಷ್ಣಕಾಂತ್ ಆರೋಪಿ ವಿರುದ್ಧ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೋ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯವು ಜೀವಾವಧಿ ಜೈಲುಶಿಕ್ಷೆ ವಿಧಿಸಿದೆ.

Post a Comment