".

Header Ads

ಜಾತಿ ಶ್ರೇಷ್ಠತೆಯ ಭ್ರಮೆಯಿಂದ ನಾವು ಹೊರಬರಬೇಕಿದೆ: ಮೋಹನ್‌ ಭಾಗವತ್‌




ಜಾತಿಗಳು ಸೃಷ್ಟಿಯಾಗಿರುವುದು ದೇವರಿಂದಲ್ಲ, ಪುರೋಹಿತರಿಂದ. ಸತ್ಯವೇ ದೇವರು. ಹೆಸರು, ಸಾಮರ್ಥ್ಯ ಮತ್ತು ಗೌರವ ಏನೇ ಇರಲಿ, ಇಲ್ಲಿ ಎಲ್ಲರೂ ಒಂದೇ ಮತ್ತು ಯಾರ ನಡುವೆಯೂ ಯಾವುದೇ ವ್ಯತ್ಯಾಸಗಳಿಲ್ಲ, ಶಾಸ್ತ್ರದ ಆಧಾರದ ಮೇಲೆ ಕೆಲವು ಪಂಡಿತರು ಹೇಳುವುದು ಸುಳ್ಳು. ಜಾತಿ ಶ್ರೇಷ್ಠತೆಯ ಭ್ರಮೆಯಿಂದ ನಾವು ದಾರಿ ತಪ್ಪುತ್ತಿದ್ದು, ಈ ಭ್ರಮೆಯಿಂದ ಹೊರಬರಬೇಕಿದೆ  ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳುವ ಮೂಲಕ ದೇಶದಲ್ಲಿರುವ ಜಾತೀಯತೆಯ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಆತ್ಮಸಾಕ್ಷಿ ಮತ್ತು ಪ್ರಜ್ಞೆ ಒಂದೇ ಆಗಿದ್ದು, ಅಭಿಪ್ರಾಯಗಳು ಮಾತ್ರ ಭಿನ್ನವಾಗಿವೆ ಎಂದ ಅವರು, ತುಳಸಿದಾಸ್, ಕಬೀರ್ ಮತ್ತು ಸೂರದಾಸ್‌ ಅವರಿಗಿಂತ ಸಂತ ರೋಹಿದಾಸ್ ಅವರು ಮೇಲಿದ್ದರು. ಆದ್ದರಿಂದ ಅವರನ್ನು ಸಂತ ಶಿರೋಮಣಿ ಎಂದು ಪರಿಗಣಿಸಲಾಗಿದೆ. ಧರ್ಮವೆಂದರೆ ಹೊಟ್ಟೆ ತುಂಬಿಸುವುದಷ್ಟೇ ಅಲ್ಲ ಎಂದು ಸಂತ ರೋಹಿದಾಸರು ಹೇಳಿದ್ದರು. ನಿಮ್ಮ ಧರ್ಮಕ್ಕೆ ಅನುಗುಣವಾಗಿ ನಿಮ್ಮ ಕೆಲಸವನ್ನು ಮಾಡಿ. ಅದರಿಂದ ಸಮಾಜವನ್ನು ಒಗ್ಗೂಡಿಸಿ ಮತ್ತು ಅದರ ಪ್ರಗತಿಗೆ ಕೆಲಸ ಮಾಡಿ. ದೇವರ ಮುಂದೆ ಎಲ್ಲರೂ ಸಮಾನರು. ಆತನ ಮುಂದೆ ಜಾತಿ, ಪಂಗಡ ಎಂಬುದೆಲ್ಲಾ ಇಲ್ಲ. ಇದು ಸೃಷ್ಟಿಯಾಗಿದ್ದು ಧರ್ಮ ಗುರುಗಳಿಂದ. ಇದು ತಪ್ಪು ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ.

Powered by Blogger.