".

Header Ads

ಉಡುಪಿಜಿಲ್ಲೆಯ ಉಪ್ಪೂರಿನಲ್ಲಿ ಭೀಕರ ಸರಣಿ ಅಪಘಾತ

 


ಬ್ರಹ್ಮಾವರದ ತಾಲೂಕಿನ ಉಪ್ಪೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಸಂಭವಿಸಿದ್ದು,  ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋದ ಲಾರಿಗೆ, ಹಿಂದಿನಿಂದ ಬಂದ ಇನ್ನೊಂದು‌ ಲಾರಿ ಡಿಕ್ಕಿ  ಹೊಡೆದಿದೆ.ಪರಿಣಾಮ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.


ಉಡುಪಿಯ ಬ್ರಹ್ಮಾವರ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ. ಗಾಯಗೊಂಡ ಲಾರಿ ಚಾಲಕನನ್ನು ಕುಮಟಾದ ಕದಗಲ್ ಮೂಲದ ಮಹೇಶ್ ಗೌಡ ಹಾಗೂ ಬೈಕ್ ಸವಾರನನ್ನು ಹರೀಶ್ ಎಂದು ಗುರುತಿಸಲಾಗಿದೆ.

ಹರೀಶ್‌ ಬೈಕ್‌ನಲ್ಲಿ ಬರುವಾಗ ಸ್ಕಿಡ್‌ ಆಗಿ ಕೆಳಗೆ ಬಿದ್ದಿದ್ದಾನೆ. ಅದೇ ರಸ್ತೆಯಲ್ಲಿ ಬರುತ್ತಿದ್ದ ಚಾಲಕ ಅಪಘಾತವನ್ನು ತಪ್ಪಿಸಲು ಹೋಗಿದ್ದು, ಈ ವೇಳೆ ಹಿಂದಿನಿಂದ ಬಂದ ಮತ್ತೊಂದು ಲಾರಿ ಡಿಕ್ಕಿ‌ ಹೊಡೆದಿದೆ. ಪರಿಣಾಮ ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿದೆ. ಇದರ ಪರಿಣಾಮ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರ ಹಾಗೂ ಲಾರಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

 


 
Powered by Blogger.