ಕುಂದಾಪುರ ಠಾಣೆಯ ಕಾನ್ಸ್ಟೆಬಲ್ ಆತ್ಮಹತ್ಯೆ
ರಾಮ ಗೌಡ (32) ಆತ್ಮಹತ್ಯೆಗೆ ಶರಣಾದವರು. ಕಳೆದ 5 ವರ್ಷಗಳಿಂದ ಕುಂದಾಪುರ ಠಾಣೆಯಲ್ಲಿ ಕಾನ್ಸ್ಟೆಬಲ್ ಆಗಿದ್ದರು. ಮಂಗಳವಾರ ಘಟನೆ ಬೆಳಕಿಗೆ ಬಂದಿದೆ.ಮೇಲಧಿಕಾರಿಗಳು ಮತ್ತು ಸಹೋದ್ಯೋಗಿಗಳಿಗೆ ತಿಳಿಸದೆ ಫೆಬ್ರವರಿ 2ರಿಂದಲೇ ರಾಮ ಗೌಡ ಅವರು ಕೆಲಸಕ್ಕೆ ಗೈರು ಹಾಜರಾಗಿದ್ದರು. ಅಲ್ಲದೆ ಕಳೆದ ನಾಲ್ಕೈದು ದಿನಗಳಿಂದ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಮಂಗಳವಾರ ಬೆಳಗ್ಗೆ ಕಾಸರಗೋಡಿನ ಇಕೋ ಬೀಚ್ ಸನಿಹದಲ್ಲಿರುವ ಪಾರ್ಕ್ ಬಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇನ್ನು ಮೃತದೇಹದ ಬಳಿ ಬ್ಯಾಗ್ ಕೂಡಾ ಪತ್ತೆಯಾಗಿದೆ. ಸ್ಥಳಕ್ಕೆ ಕುಂದಾಪುರ ಎಸ್ಐ ಈರಯ್ಯ ಹಾಗೂ ಸಿಬಂದಿ ಭೇಟಿದ್ದು, ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ರಾಮ ಬರೆದಿದ್ದಾರೆನ್ನಲಾದ ಡೆತ್ನೋಟ್ ಪತ್ತೆಯಾಗಿದ್ದು, ಅದರಲ್ಲಿ ತಂಗಿಯ ಮದುವೆ ಮಾಡಿಸಲು ನನ್ನಿಂದ ಸಾಧ್ಯವಾಗದ ಕಾರಣ ಆಕೆಗೆ ಸರ್ಕಾರಿ ಉದ್ಯೋಗ ನೀಡಿ ಎಂದು ಬರೆದಿದ್ದಾರೆ ಎಂದು ತಿಳಿದು ಬಂದಿದೆ.
Post a Comment