".

Header Ads

ಬಿಜೆಪಿ ಸೇರ್ಪಡೆಯಾಗಿದ್ದ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ


ಕಾಂಗ್ರೆಸ್‌ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. 

ಶಿವು ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ಕಾರ್ಯಕರ್ತನಾಗಿದ್ದು, ಕಾಂಗ್ರೆಸ್ ಶಾಸಕರೋರ್ವರ ಹಿಂಬಾಲಕರು ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. 

ಶಿವು ಎಂಬವರು ಕಳೆದ ತಿಂಗಳು ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇವರು ಕಾಂಗ್ರೆಸ್​ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದರು. ಶಿವು ಅವರು ಬಿಜೆಪಿ ಸೇರ್ಪಡೆಯಾದ ವಿಷಯ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರ ಬೆಂಬಲಿಗರ ಕಣ್ಣು ಕೆಂಪಗಾಗಿಸಿದ್ದವು. ಬಿಜೆಪಿ ಸೇರಿದ ವಿಚಾರವಾಗಿ ಶಿವು ಜೊತೆ ಶಾಸಕರ ಹಿಂಬಾಲಕರು ಗಲಾಟೆ ಕೂಡ ಮಾಡಿದ್ದರು. ಕಿಡಿಗೇಡಿಗಳು ಶಿವು ಅವರ ಮನೆಗೆ ನುಗ್ಗಿ  ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗಾಯಾಳು ಶಿವುನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಕರಣ ಸಂಬಂಧ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎನ್​.ಆರ್​ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Powered by Blogger.