".

Header Ads

ಕೇರಳದಲ್ಲಿ ಭಾರೀ ಸುದ್ದಿ ಮಾಡಿದ್ದ ಅಂಜುಶ್ರೀ ಸಾವನಪ್ಪಿದ್ದು ಚಿಕನ್ ಬಿರಿಯಾನಿಯಿಂದಲ್ಲ ಇಲಿ ಪಾಷಾಣದಿಂದ…!!



ಮಂಜೇಶ್ವರ ಗೋವಿಂದ ಪೈ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಅಂಜುಶ್ರೀ ಪಾರ್ವತಿ  ಆನ್‌ಲೈನ್‌ನಲ್ಲಿ ಖರೀದಿಸಿದ್ದ ಆಹಾರ ಸೇವಿಸಿರುವುದು ಸಾವಿಗೆ ಕಾರಣ ಎಂದು ಕುಟುಂಬಸ್ಥರು ಮೇಲ್ಪರಂಬ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಇದರಂತೆ ಹೋಟೆಲ್ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಂಡಿದ್ದರು. ಆದರೆ ಆಹಾರದಿಂದ ಸಾವು ಸಂಭವಿಸಿಲ್ಲ ಎಂದು ತನಿಖೆಯಿಂದ ದೃಢಪಟ್ಟಿತ್ತು.

ಈ ಘಟನೆ ಬೆಳಕಿಗೆ ಬರ್ತಿದ್ದಂತೆ, ಅದಕ್ಕೆಸಂಬಂಧಪಟ್ಟ ಹೋಟೆಲ್‌ನಲ್ಲಿರುವ ನೀರು ಮತ್ತು ಆಹಾರವನ್ನು ಪರಿಶೀಲಿಸಿದ್ದರು. ಈ ಘಟನೆ ಆರೋಗ್ಯ ಸಚಿವರ ಗಮನಕ್ಕೆ ಬರುತ್ತಿದ್ದಂತೆ ತನಿಖೆಗೆ ಆದೇಶಿಸಲಾಗಿತ್ತು. ಪೊಲೀಸರು ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದರು.
ಇದೀಗ ಅಂಜುಶ್ರೀ ಪಾರ್ವತಿಯ ಸಾವಿಗೆ ಇಲಿ ಪಾಷಾಣ ಸೇವನೆ ಕಾರಣ ಎಂದು ರಾಸಾಯನಿಕ ತಪಾಸಣಾ ವರದಿಯಿಂದ ತಿಳಿದು ಬಂದಿದೆ.

 

Powered by Blogger.