".

Header Ads

ಶಿವಮೊಗ್ಗದ ಬ್ರಹ್ಮ-ವಿಷ್ಣು-ಮಹೇಶ್ವರ ದೇವಸ್ಥಾನದ ರಥಕ್ಕೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

 


ನಗರದ ರಾಗಿಗುಡ್ಡದಲ್ಲಿರುವ ಬ್ರಹ್ಮ -ವಿಷ್ಣು -ಮಹೇಶ್ವರ ದೇವಸ್ಥಾನದ ಆವರಣದಲ್ಲಿರುವ ರಥಕ್ಕೆ ಕಿಡಿಗೇಡಿಗಳು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿರುವ ಘಟನೆ ಸೋಮವಾರ  ನಡೆದಿದ್ದು ಬೆಳಕಿಗೆ ಬಂದಿದೆ.

 


 

ಘಟನೆಯಲ್ಲಿ ರಥಕ್ಕೆ ಬಹುಪಾಲು ಹಾನಿಯಾಗಿದೆ. ಮಾಸ್ಕ್ ಧರಿಸಿ ಬಂದ ಇಬ್ಬರು ದುಷ್ಕರ್ಮಿಗಳಿಂದ ಕೃತ್ಯ ಎಸೆಗಲಾಗಿದೆ ಎಂಬುದು ತಿಳಿದುಬಂದಿದೆ. ಇವರು ಯಾರು? ಯಾವ ಕಾರಣಕ್ಕೆ ರಥಕ್ಕೆ ಬೆಂಕಿ ಹಚ್ಚಿದ್ದಾರೆ ಎಂಬುದು ತಿಳಿದು ಬಂದಿಲ್ಲ.

ಈ ಸಂಬಂಧ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಭಕ್ತರು ತೀವ್ರ ಆಕ್ರೋಶವನ್ನು ಹೊರಹಾಕಿದ್ದು, ತಪ್ಪಿತಸ್ಥರು ಯಾರೇ ಇರಲಿ ಬಂಧಿಸಿ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆಯಿಂದ ರಥ ಬಹುಪಾಲು ಹಾನಿಗೊಳಗಾಗಿದೆ. ಮಾ.4 ರಂದು ಸಂಜೆ 4 ಗಂಟೆ ಹೊತ್ತಿಗೆ ಘಟನೆ ನಡೆದಿದೆ ಎಂದು ದೇವಸ್ಥಾನದ ಅರ್ಚಕ ರಾಘವೇಂದ್ರ ದೂರು ಸಲ್ಲಿಸಿದ್ದಾರೆ.  ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಸುತ್ತಮುತ್ತಲು ಇರುವ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆಗೆ ಮುಂದಾಗಿದ್ದಾರೆ.

Powered by Blogger.