ಬಿಸಿಯಾದ ವಾತಾವರಣದಿಂದ ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ
ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಏನೇನು ಮಾಡಬೇಕು? ಏನು ಮಾಡಬಾರದು? ಆರೋಗ್ಯ ರಕ್ಷಣೆಗೆ ಹಿರಿಯರು, ವೃದ್ಧರು ಹಾಗೂ ಮಕ್ಕಳ ಬಗ್ಗೆ ಏನೇನು ಎಚ್ಚರಿಕೆ ವಹಿಸಬೇಕು ಎಂಬ ಸಲಹೆ-ಸೂಚನೆಯನ್ನು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಅವುಗಳನ್ನು ಇಲ್ಲಿ ನೀಡಲಾಗಿದೆ.
ಬಿಸಿಯಾದ ವಾತಾವರಣದಿಂದ ಜನರು ಅಸ್ವಸ್ಥರಾಗುವುದನ್ನು ತಪ್ಪಿಸಲು ಮತ್ತು ಅತಿಯಾದ ಉಷ್ಣಾಂಶದಿಂದ ಅನಾರೋಗ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಕ್ತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
- ಹೆಚ್ಚು ನೀರು ಕುಡಿಯುವುದು: ಬಾಯಾರಿಕೆ ಇಲ್ಲದಿದ್ದರೂ ಸಹ ಹೆಚ್ಚು ನೀಡು ಆಗಾಗ್ಗೆ ಕುಡಿಯಬೇಕು. ಬಾಯಾರಿಕೆಯು ನಿರ್ಜಲೀಕರಣದ ಲಕ್ಷಣವಾಗಿದೆ.
- ಪ್ರಯಾಣದ ಸಂದರ್ಭದಲ್ಲಿ ನೀರನ್ನು ಜತೆಗೆ ತೆಗೆದುಕೊಂಡು ಹೋಗುವುದು ಉತ್ತಮ.
- ಮನೆಯಲ್ಲಿಯೇ ಸಿದ್ಧಪಡಿಸಿದ ನಿಂಬೆ ಹಣ್ಣಿನ ಶರಬತ್ತು, ಮಣ್ಣಿಗೆ 11, ಹಣ್ಣಿನ ಜ್ಯೂಸ್ಗಳನ್ನು ಒಂದು ಚಿಟಿಕೆ ಉಪ್ಪಿಸೊಂದಿಗೆ ಸೇವಿಸುವುದು ಉತ್ತಮ.
- ಕಲ್ಲಂಗಡಿ, ಕರಬೂಜ, ಕಿತ್ತಳೆ ದ್ರಾಕ್ಷಿ, ಅನನಾಸ್, ಸೌತೆಕಾಯಿ, ಎಳನೀರನ್ನು ಹೆಚ್ಚಾಗಿ ಸೇವಿಸಬೇಕು.
- ಶರೀರವನ್ನು ಸುರಕ್ಷಿಸವಾಗಿಟ್ಟುಕೊಳ್ಳಲು ತಿಳಿ ಬಣ್ಣದ, ಮೆತ್ತಗಿನ ಹತ್ತಿ ಬಟ್ಟೆ ಧರಿಸುವುದು ಒಳ್ಳೆಯದು.
- ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ, ಶೂ ಧರಿಸಬೇಕು.
- ರೇಡಿಯೋ, ದೂರದರ್ಶನ ಹಾಗೂ ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನದ ಮಾಹಿತಿಯನ್ನು ಪಡೆಯುತ್ತಿರಿ.
- ಸಾಧ್ಯವಾದಷ್ಟು ಒಳಾಂಗಣದಲ್ಲಿರಿ.
- ಹೊರಾಂಗಣ ಚಟುವಟಿಕೆಗಳನ್ನು ಆದಷ್ಟೂ ಬೆಳಗಿನ ಹೊತ್ತು ಅಥವಾ ಸಂಜೆಗೆ ಸೀಮಿತವಿರುವಂತೆ ಬದಲಾಯಿಸಿಕೊಳ್ಳಿ.
- ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು, ಗರ್ಣಣಿಯರು, ಹೊರಾಂಗಣದಲ್ಲ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಂದ ಬಳಲುತ್ತಿರುವವರು ಹಾಗೂ ಇತರ ಅರೋಗ್ಯ ಸಮಸ್ಯೆಗಳರುವವರು, ಅದರಲ್ಲೂ ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗರೂಕತೆ ವಹಿಸಬೇಕು.
- ಬಿಸಿಲಿನಲ್ಲಿ, ಅಂದರೆ ಮಧ್ಯಾಹ್ನ 12 ಗಂಟೆಯಿ೦ದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಬೇಕು.
- ಈ ಸಂದರ್ಭದಲ್ಲಿ ಹೊರಾಂಗಣ ಚಟುವಟಿಕೆಗಳನ್ನು ಮಾಡಬಾರದು.
- ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
- ಮದ್ಯಪಾನ, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಂದ ದೂರವಿರಿ.
- ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
- ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
- ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನ ತಾಪಮಾನವು ಅವರಿಗೆ / ಅವುಗಳಿಗೆ ಅಪಾಯಕಾರಿಯಾಗಬಹುದು.
ಇಷ್ಟೇ ಅಲ್ಲದೆ ಕೆಲಸದ ಸ್ಥಳಗಳಲ್ಲಿ ಮಾಡಬೇಕಾದ ವ್ಯವಸ್ಥೆಗಳೂ ಸೇರಿದಂತೆ ಇನ್ನೂ ಅನೇಕ ಸಲಹೆ ಸೂಚನೆಗಳನ್ನು ಆರೋಗ್ಯ ಇಲಾಖೆ ನೀಡಿದೆ. ಜತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಸಲಹೆ ಸೂಚನೆಗಳನ್ನೂ ನೀಡಿದೆ.

Post a Comment