ಪೊಲೀಸ್ ಜೀಪ್ -ಬೈಕ್ ಢಿಕ್ಕಿ; ಪಾಣಾಜೆ ಸಿಎ ಬ್ಯಾಂಕ್ ನ ಸಿಇಒ ಸಾವು
ಮಾಣಿ-ಮೈಸೂರು ರಸ್ತೆಯ ಆರ್ಯಾಪು ಗ್ರಾಮದ ಸಂಪ್ಯ ಎಂಬಲ್ಲಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪೊಲೀಸ್ ವಾಹನ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಪೊಲೀಸ್ ವಾಹನ ಜಿಲ್ಲೆಯ ಡಿ.ಆರ್.ಗೆ ಸೇರಿದ್ದಾಗಿದ್ದು, ಸುಳ್ಯ ಕಡೆಯಿಂದ ಪುತ್ತೂರಿಗೆ ಆಗಮಿಸುತ್ತಿದ್ದರೆ, ಲಕ್ಷ್ಮಣ್ ಅವರು ಪುತ್ತೂರಿನಿಂದ ಆರ್ಲಪದವು ಕಡೆಗೆ ಹೋಗುತ್ತಿದ್ದಾಗ ಮುಖಾಮುಖಿ ಢಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a Comment