".

Header Ads

ಗ್ಯಾಂಗ್​ರೇಪ್​ ಆರೋಪಿಯ ಮನೆಯನ್ನು ಧ್ವಂಸ ಮಾಡಿದ ಮಹಿಳಾ ಪೊಲೀಸ್​ ಸಿಂಗಂಗಳು !

 


ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಮನೆಯನ್ನು ಮಹಿಳಾ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ಕೆಡವಲಾಯಿತು. ಈ ಘಟನೆ ಮಧ್ಯಪ್ರದೇಶದ ದಾಮೋಹ್​ನಲ್ಲಿ ನಡೆದಿದೆ. ಕೆಡವಲಾದ ಮನೆಯು ಕೌಶಲ್ ಕೆ. ಚೌಬೆ ಎಂಬ ವ್ಯಕ್ತಿಗೆ ಸೇರಿದ್ದಾಗಿದೆ.

ಆರೋಪಿ ಚೌಬೆ, ದಾಮೋಹ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ನಾಲ್ವರು ಆರೋಪಿಗಳಲ್ಲಿ ಒಬ್ಬರು. ಸರಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದರಿಂದ ಅದನ್ನು ಕೆಡವಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಧ್ಯಪ್ರದೇಶದ ಪೊಲೀಸರು ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ.

ಅಪರಾಧ ಕೃತ್ಯಗಳಲ್ಲಿ ತೊಡಗುವವರಲ್ಲಿ ಭಯ ಮೂಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ಪ್ರಶಿತಾ ಕುರ್ಮಿ ತಿಳಿಸಿದ್ದಾರೆ. ಮಹಿಳಾ ಪೊಲೀಸ್ ಅಧಿಕಾರಿಗಳು ಜಿಲ್ಲಾಧಿಕಾರಿಯಿಂದ ಅನುಮತಿ ಪಡೆದು ಬುಲ್ಡೋಜರ್ ಬಳಸಿ ಆರೋಪಿಯ ಮನೆ ಕೆಡವಿದ್ದಾರೆ. ಪ್ರಶಿತಾ ನೇತೃತ್ವದಲ್ಲಿ ತೆರವು ಪ್ರಕ್ರಿಯೆ ಪೂರ್ಣಗೊಂಡಿದೆ.

Powered by Blogger.