".

Header Ads

ಹಿಂದೂ ದೇಗುಲಗಳಿಗೆ ಭದ್ರತೆ ನೀಡುವಂತೆ ಆಸ್ಟ್ರೇಲಿಯಾ ಪ್ರಧಾನಿಗೆ ಮೋದಿ ಒತ್ತಾಯ


ಹಿಂದೂ ದೇವಾಲಯಗಳ ಮೇಲೆ ಆಸ್ಪ್ರೇಲಿಯಾದಲ್ಲಿ ನಡೆಯುತ್ತಿರುವ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಸೂಕ್ತ ಭದ್ರತೆ ನೀಡುವಂತೆ ಆಸ್ಪ್ರೇಲಿಯಾ ಪ್ರಧಾನಿ ಆ್ಯಂಟನಿ ಅಲ್ಬನೀಸ್‌ ಅವರನ್ನು ಒತ್ತಾಯಿಸಿದ್ದಾರೆ.

ಅಲ್ಲದೆ ಭಾರತೀಯ ಸಮುದಾಯದ ಜನರಿಗೆ ಸೂಕ್ತ ಭದ್ರತೆ ನೀಡುವಂತೆ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಪ್ರಧಾನಿ ಅಲ್ಬನೀಸ್, ಭಾರತದ ಪ್ರವಾಸದಲ್ಲಿದ್ದು ಅವರ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಈ ವೇಳೆ ಮೋದಿ, '' ಕಳೆದ ಕೆಲವು ವಾರಗಳಿಂದ ಆಸ್ಪ್ರೇಲಿಯದಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ನಿರಂತರ ದಾಳಿಯ ವರದಿಗಳು ಬರುತ್ತಿರುವುದು ವಿಷಾದದ ಸಂಗತಿ. ,'' ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.


Powered by Blogger.