2nd PUC ಫಲಿತಾಂಶ ಪ್ರಕಟ: ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣ
ದ್ವಿತೀಯ ಪಿಯುಸಿ ಫಲಿತಾಂಶ 2023 ಲೈವ್: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. karresults.nic.in ನಲ್ಲಿ ಫಲಿತಾಂಶ ನೋಡಬಹುದು. ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಚೆಕ್ ಮಾಡುವುದು ಹೇಗೆ ಸೇರಿದಂತೆ ರಿಸಲ್ಟ್ಗೆ ಸಂಬಂಧಿಸಿದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.
ಈ ಬಾರಿ ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 61.22 ಶೇ ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಶೇ.85.71 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ಶೇ.75.89 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

Post a Comment