".

Header Ads

ಪ್ರಮೋದ್ ಮುತಾಲಿಕ್ – ಆಸ್ತಿಗಿಂತ ಪೊಲೀಸ್ ಕೇಸ್ ಗಳೇ ಜಾಸ್ತಿ…


ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮಂಗಳವಾರ ಕಾರ್ಕಳದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.ನಾಮಪತ್ರದೊಂದಿಗೆ ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸಿರುವ ಅವರ ಕೈಯಲ್ಲಿ 10,500 ರು. ನಗದು ಮತ್ತು ಬ್ಯಾಂಕುಗಳಲ್ಲಿ 2,63,500 ರು ಠೇವಣಿ ಬಿಟ್ಟರೇ ಬೇರೆ ಯಾವುದೇ ಚರಾಸ್ತಿ ಅಥವಾ ಸ್ಥಿರಾಸ್ತಿ, ಸ್ವಂತ ವಾಹನ ಅಥವಾ ಸಾಲ ಇಲ್ಲ ಎಂದು ಉಲ್ಲೇಖಿಸಿದ್ದಾರೆ. ಪ್ರಮೋದ್‌ ಮುತಾಲಿಕ್‌ ಅವರಿಗೆ ಪತ್ನಿ, ಕುಟುಂಬ ಇಲ್ಲ. ಯಾರೂ ಅವಲಂಬಿತರೂ ಇಲ್ಲ. ಉಳಿದಂತೆ ಅವರ ಹೆಸರಲ್ಲಿ ಯಾವುದೇ ಜಮೀನು, ನಿವೇಶನ, ಮನೆ, ವಾಹನ, ಚಿನ್ನಭರಣ, ಸಾಲ, ದುಬಾರಿ ವಸ್ತುಗಳು ಇಲ್ಲ. ಆದಾಯ ಮೂಲವನ್ನು ದೇಣಿಗೆ ಸಂಗ್ರಹ, ಉದ್ಯೋಗ ಸಮಾಜಸೇವೆ ಎಂದು ಚುನಾವಣೆ ಆಯೋಗಕ್ಕೆ ಸಲ್ಲಿಸಿರುವ ಅಫಿಡೆವಿಟ್‌ನಲ್ಲಿ ತಿಳಿಸಿದ್ದಾರೆ. ಯಾದಗಿರಿ, ಶೃಂಗೇರಿ, ಬೆಂಗಳೂರು, ಬಬಲೇಶ್ವರ, ಬಾಗಲಕೋಟೆ ನವನಗರ, ಜೇವರ್ಗಿ ಹಾಗೂ ಮುರುಡೇಶ್ವರ ಸೇರಿ ಏಳು ಪೊಲೀಸ್‌ ಠಾಣೆಗಳಲ್ಲಿ ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡುವ ಕೇಸ್‌ ಪ್ರಮೋದ್‌ ಮುತಾಲಿಕ್‌ ವಿರುದ್ಧ ದಾಖಲಾಗಿದೆ. ಪ್ರಚೋದನಾಕಾರಿ ಭಾಷಣ ಮತ್ತು ಸಶಸ್ತ್ರ ಕಾಯ್ದೆ ಉಲ್ಲಂಘನೆ, ಮಾನನಷ್ಟ ಮೊಕದ್ದಮೆ, ಜೀವ ಬೆದರಿಕೆ, ಧರ್ಮಗಳ ನಡುವೆ ದ್ವೇಷ ಭಾವನೆ, ಧಾರ್ಮಿಕ ಭಾವನೆಗೆ ಧಕ್ಕೆ, ಅವಾಚ್ಯ ಶಬ್ದಗಳಿಂದ ನಿಂದನೆ, ಕೋಮು ಗಲಭೆ, ಜೀವ ಬೆದರಿಕೆ, ಪ್ರಚೋದನಕಾರಿ ಹೇಳಿಕೆ, ಅವಹೇಳನ, ಆದೇಶ ಉಲ್ಲಂಘನೆ ಕೇಸ್‌ಗಳು ದಾಖಲಾಗಿದೆ ಎಂದು ಚುನಾವಣಾ ಆಯೋಗಕ್ಕೆ ತಿಳಿಸಿದ್ದಾರೆ.
Powered by Blogger.