".

Header Ads

ಚುನಾವಣೆ ತರಬೇತಿಯಲ್ಲಿದ್ದ ನೌಕರ ಹೃದಯಾಘಾತದಿಂದ ಸಾವು

 


ಚಾಮರಾಜನಗರದ ಹನೂರಿನ ವಿವೇಕಾನಂದ ಶಾಲೆಯಲ್ಲಿ ಆಯೋಜಿಸಿದ್ದ ಚುನಾವಣಾ ತರಬೇತಿಯಲ್ಲಿ ಪಾಲ್ಗೊಂಡಿದ್ದ ನೌಕರನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಜಗದೀಶ್ (40) ಮೃತ ನೌಕರರಾಗಿದ್ದಾರೆ.

ಹನೂರಿನ ಖಜಾನೆ ಇಲಾಖೆಯಲ್ಲಿ ಜಗದೀಶ್ ಕೆಲಸ ನಿರ್ವಹಿಸುತ್ತಿದ್ದರು.

ವಿಧಾನಸಭೆ ಚುನಾವಣೆ ನಿಮಿತ್ತ ಅವರನ್ನು ಚುನಾವಣಾ ಕರ್ತವ್ಯಕ್ಕೆ ತೊಡಗಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿವೇಕಾನಂದ ಶಾಲೆಯಲ್ಲಿ ಚುನಾವಣಾ ತರಬೇತಿ ನಡೆಯುತ್ತಿತ್ತು. ತರಬೇತಿ ಆರಂಭವಾಗುತ್ತಿದ್ದಂತೆ ಜಗದೀಶ್‌ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ.ಸ್ಥಳಕ್ಕೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Powered by Blogger.