ಲಿಂಗಾಯತ ನಾಯಕರ ಬಂಡಾಯ : ಬಿಜೆಪಿ ಸಭೆ
ಬಿಜೆಪಿ ವಿರುದ್ಧ ಬಂಡಾಯವೆದ್ದಿರುವ ಲಿಂಗಾಯತ ನಾಯಕರಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದು ಕಮಲ ಪಕ್ಷ ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತ ಮತಗಳನ್ನು ಕಳೆದುಕೊಳ್ಳಬಹುದು ಎಂದು ಹೇಳಲಾಗಿದೆ.
ಬಿಜೆಪಿಯೊಳಗಿನ ಇತ್ತೀಚಿನ ಬೆಳವಣಿಗೆಗಳ ಲಾಭವನ್ನು ಕಾಂಗ್ರೆಸ್ ಪಕ್ಷವು ಪಡೆದುಕೊಂಡಿದ್ದು, ಬಿಜೆಪಿ ಲಿಂಗಾಯತ ವಿರೋಧಿ ಎಂದು ಬಿಂಬಿಸಲು ಹೊರಟಿದೆ.
ಕೆಲವು ಪ್ರಮುಖ ನಾಯಕರ ಇತ್ತೀಚಿನ ನಿರ್ಗಮನದಿಂದಾಗಿ ಪಕ್ಷಕ್ಕೆ ಉಂಟಾಗಿರುವ ಡ್ಯಾಮೇಜ್ ಸರಿಪಡಿಸುವ ಕ್ರಮಗಳ ಬಗ್ಗೆ ಚರ್ಚಿಸಲು ಶಾ ಒಂದು ದಿನ ಕಳೆಯಲು ಬೆಂಗಳೂರನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಇತರ ರಾಷ್ಟ್ರೀಯ ನಾಯಕರು ಪಾಲ್ಗೊಳ್ಳುವ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ರ್ಯಾಲಿಗಳು ಮತ್ತು ಕಾರ್ಯಕ್ರಮಗಳ ಬಗ್ಗೆಯೂ ಶಾ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Post a Comment