".

Header Ads

ಬಿಜೆಪಿ ವಿರುದ್ಧ ತಮ್ಮ ಶಕ್ತಿ ಪ್ರದರ್ಶನ : ಅಖಾಡಕ್ಕೆ ಆರ್‌ಎಸ್‌ಎಸ್‌ ಎಂಟ್ರಿ


ಬಿಜೆಪಿ ಭದ್ರಕೋಟೆ ಪುತ್ತೂರು ವಿಧಾನಸಭಾ ಕ್ಷೇತ್ರ ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೈವೋಲ್ಟೇಜ್‌ ಕ್ಷೇತ್ರವಾಗಿ ಮಾರ್ಪಟ್ಟಿದೆ.  ಹಿಂದೂ ಮುಖಂಡ ದಿವಂಗತ ಮೂಲ್ಕಿ ಸುಖಾನಂದ ಶೆಟ್ಟಿ ಅವರ ಸಹೋದರ ಸಂತೋಷ್ ಶೆಟ್ಟಿ, ಲಕ್ಷ್ಮೀಶ ತಂತ್ರಿ ಅವರು ಕಹಳೆ ಊದಿ ಚಾಲನೆ ನೀಡಿದ  ಜನಪ್ರಿಯ ನಾಯಕ ಎನಿಸಿಕೊಂಡಿರುವ ಅರುಣ್ ಕುಮಾರ್ ಪುತ್ತಿಲ ತಮ್ಮ ಬೆಂಬಲಿಗರೊಂದಿಗೆ ಬಹೃತ್‌ ಮೆರವಣಿಗೆ ನಡೆಸಿದ್ದಾರೆ.  ಅವರ ನಾಮಪತ್ರ ಸಲ್ಲಿಕೆ ವೇಳೆ ಹದಿನೈದು ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗಿದ್ದರು

ಸಂಘ ಪರಿವಾರದ ಪ್ರಭಾವಿ ಮುಖಂಡರಾಗಿರುವ ಅರುಣ್ ಕುಮಾರ್ ಪುತ್ತಿಲ ಅವರು ನಾಮಪತ್ರ ಸಲ್ಲಿಸಿದ್ದು,  ಈ ಮೂಲಕ ಬಿಜೆಪಿ ವಿರುದ್ಧ ತಮ್ಮ ಶಕ್ತಿ ಪ್ರದರ್ಶನ ನಡೆಸಿದ್ದರು.

ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಅರುಣ್ ಕುಮಾರ್ ಪುತ್ತಿಲ ಅವರ ನಾಮಪತ್ರ ಮೆರವಣಿಗೆಗೆ ದರ್ಬೆಯಲ್ಲಿ ಶಂಖನಾದ, ಕಹಳೆ ಮೊಳಗುವ ಮೂಲಕ ಚಾಲನೆ ನೀಡಲಾಯಿತು.

ಪುತ್ತೂರು ಸೇರಿದಂತೆ ಹಲವೆಡೆಯಿಂದ ಅಪಾರ ಸಂಖ್ಯೆಯಲ್ಲಿ ಬೆಂಬಲಿಗರು ನೆರೆದಿದಿದ್ದು, ಎಲ್ಲೆಡೆ ಕೇಸರಿ ಮಯವಾಗಿತ್ತು. ಕೇಸರಿ ಶಾಲು ಧರಿಸಿದ ಸಾವಿರಾರು ಕಾರ್ಯಕರ್ತರು ಶಾಲು ಮೇಲೆತ್ತಿ ಬೀಸುವ ಮೂಲಕ ಅರುಣ್ ಪುತ್ತಿಲ ಅವರಿಗೆ ಸ್ವಾಗತ ಕೋರಿ  ರಸ್ತೆಯುದ್ದಕ್ಕೂ ಪುಷ್ಪ ವೃಷ್ಟಿ ಸುರಿಸಲಾಗಿತ್ತು. ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಶಕ್ತಿ ಪ್ರದರ್ಶನದ ಬಳಿಕ ಎದುರಾಳಿಗಳಲ್ಲಿ ನಡುಕ ಹುಟ್ಟಿಸಿದಂತಾಗಿದೆ.
ಅರುಣ್ ಪುತ್ತಿಲ ಬಗ್ಗೆ ಅಪಾರ ಗೌರವವಿದೆ- ನಳಿನ್ ಕುಮಾರ್ ಕಟೀಲ್:-

ಬಿಜೆಪಿ ಬಂಡಾಯದ ವಿಚಾರಕ್ಕೆ ಪ್ರತಿಕ್ರಿಯಿಸಿ ಅವರು ಅರುಣ್ ಕುಮಾರ್ ಪುತ್ತಿಲ ಮೇಲೆ ಅಪಾರ ಗೌರವವಿದೆ.ಸಂಘಟನೆಯಲ್ಲಿ ಗುರುತಿಸಿ,ಹಲವು ಹೋರಾಟಗಳಲ್ಲಿ ತೊಡಗಿಸಿಕೊಂಡವರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿದೆ. ಆ ಮೂಲಕ ಸ್ಪರ್ಧಿಸಿದ್ದು, ಬಿಜೆಪಿ ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಲಿದೆ ಎಂದರು.

 

Powered by Blogger.