".

Header Ads

ಆದಾಯ ಮೀರಿ ಆಸ್ತಿ ಗಳಿಕೆ : ಡಿಕೆ ಶಿವಕುಮಾರ್ ಅರ್ಜಿ ವಜಾ


ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ ತನಿಖೆಗೆ ಅನುಮತಿ ನೀಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.  

ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಅನುಮತಿ ನೀಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಡಿಕೆ.ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಡಿ ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿ ಏಪ್ರಿಲ್‌ 17ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ಗುರುವಾರ ಪ್ರಕಟಿಸಿತು.

Powered by Blogger.