ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಬರ್ಬರ ಹತ್ಯೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಪ್ರವೀಣ ಕಮ್ಮಾರ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ತಡ ರಾತ್ರಿ ಪ್ರವೀಣ ಅವರ ಹೊಟ್ಟೆಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಂಗಳವಾರ ತಡರಾತ್ರಿ ಕೆಲವು ಕಾರಣಗಳಿಗೆ ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ. ಚಾಕು ಇರಿತದಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರವೀಣ ಅವರನ್ನು ಧಾರವಾಡದ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ರಾಜಕೀಯ ವಿಷಯವಾಗಿಯೇ ಈ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

Post a Comment