".

Header Ads

ಬೆಂಗಳೂರಿನಲ್ಲಿಂದು ಪ್ರಧಾನಿ ಮೋದಿ ರೋಡ್ ಶೋ: 10 ಲಕ್ಷ ಜನ ಸೇರುವ ನಿರೀಕ್ಷೆ


ಪ್ರಧಾನಿ ನರೇಂದ್ರ ಮೋದಿಯವರು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋನಲ್ಲಿ 10 ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆಗಳಿವೆ.

ನರೇಂದ್ರ ಮೋದಿಯವರು 26 ಕಿ.ಮೀ ರೋಡ್ ಶೋ ಮಾಡಲಿದ್ದಾರೆ. ಹತ್ತು ಲಕ್ಷ ಜನ ಸೇರಿಸುವ ಟಾರ್ಗೆಟ್‌ ಬಿಜೆಪಿಗೆ ಇದೆ. ಬೆಂಗಳೂರು ದಕ್ಷಿಣ, ಬೊಮ್ಮನಹಳ್ಳಿ, ಜಯನಗರ, ಬಸವನಗುಡಿ, ಬಿಟಿಎಂ ಲೇಔಟ್, ಪದ್ಮನಾಭನಗರ, ಚಿಕ್ಕಪೇಟೆ, ಗಾಂಧಿನಗರ, ವಿಜಯ ನಗರ, ಗೋವಿಂದರಾಜು ನಗರ, ರಾಜಾಜಿನಗರ, ಮಲ್ಲೇಶ್ವರಂನಲ್ಲಿ ಕ್ಷೇತ್ರ ವ್ಯಾಪ್ತಿಗಳಲ್ಲಿ ರೋಡ್ ಶೋ ನಡೆಯಲಿದೆ.

Powered by Blogger.