".

Header Ads

ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ

 


ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮುಂದಿನ 48 ಗಂಟೆಗಳಲ್ಲಿ  ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ.

ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗಲಿದೆ.


Powered by Blogger.