'ಮೋಚಾ' ಸೈಕ್ಲೋನ್ ಎಫೆಕ್ಟ್ : ಮೇ 13 ರವರೆಗೆ ರಾಜ್ಯದ ಹಲವೆಡೆ ಭಾರಿ ಮಳೆ, 4 ಜಿಲ್ಲೆಗಳಲ್ಲಿ 'ಯೆಲ್ಲೋ ಅಲರ್ಟ್' ಘೋಷಣೆ, ಉಡುಪಿ, ದಕ್ಷಿಣ ಕನ್ನಡ ಮಳೆಯಾಗಲಿದೆ ಎಂದು ಮುನ್ಸೂಚನೆ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮೇ 13 ರವರೆಗೆ ಭಾರಿ ಮಳೆಯಾಗಲಿದೆ.
ತಮಿಳುನಾಡಿನ ಕರಾವಳಿ ಸಮೀಪದ ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ಮಾರುತಗಳಿದ್ದು, ಮುಂದಿನ 24 ಗಂಟೆಯಲ್ಲಿ ಇದು ತೀವ್ರಗೊಂಡು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮೇ 13 ರವರೆಗೆ ಭಾರಿ ಮಳೆಯಾಗಲಿದೆ.
ಚಂಡಮಾರುತ ಪರಿಣಾಮ ಮುಂದಿನ 5 ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಮೇ 11 ಮತ್ತು ಮೇ 12ರಂದು ಬಿರುಸಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ತಮಿಳುನಾಡಿನ ಕರಾವಳಿ ಸಮೀಪದ ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ಮಾರುತಗಳಿದ್ದು, ಮುಂದಿನ 24 ಗಂಟೆಯಲ್ಲಿ ಇದು ತೀವ್ರಗೊಂಡು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಕರ್ನಾಟಕ, ಕೇರಳ, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಮಾಹೆ, ಕಾರೈಕಲ್ ಹಾಗೂ ಪುದುಚೇರಿಯಲ್ಲಿ ಮೇ 8ರಿಂದ ಮೇ 12ರವರೆಗೆ ಭಾರಿ ಮಳೆ ಸುರಿಯಲಿದೆ.
ಇಂದು ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಮಳೆಯಾಗಲಿದೆ. ಮೇ.9ರಂದು ಚಾಮರಾಜನಗ ಹಾಗೂ ಮೈಸೂರಿನಲ್ಲಿ ಮಳೆಯಾದ್ರೇ, ಮೇ.10ರಂದು ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಮೈಸೂರಿನಲ್ಲಿ ಭಾರೀ ಮಳೆಯಲಾಗಿದೆ. ಹೀಗಾಗಿ ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಿಸಿದೆ.
ಇನ್ನೂ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾದ್ರೇ, ದಕ್ಷಿಣ ಒಳನಾಡಿನ ವ್ಯಾಪ್ತಿಯ ಜಿಲ್ಲೆಯಲ್ಲಿ, ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದಂತ ಗದಗ, ರಾಯಚೂರು, ಬೀದರ್, ಕಲಬುರ್ಗಿ, ಕೊಪ್ಪಳ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಅಲ್ಲಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ

Post a Comment