ಕೇರಳದ ಮಲಪ್ಪುರಂ ಜಿಲ್ಲೆಯ ತನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಭಾನುವಾರ ಸಂಜೆ ಸುಮಾರು 30 ಪ್ರಯಾಣಿಕರಿದ್ದ ಹೌಸ್ ಬೋಟ್ ಪಲ್ಟಿಯಾಗಿ ಮುಳುಗಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 20 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತನೂರ್ ಕರಾವಳಿ ಬಳಿ ಪ್ರವಾಸಿ ದೋಣಿ ಮಗುಚಿ ಬಿದ್ದಿದೆ. ಈ ಘಟನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ. ದೋಣಿಯಲ್ಲಿದ್ದವರೆಲ್ಲರೂ ಪ್ರವಾಸಿಗರಾಗಿದ್ದಾರೆ.
'ಇದುವರೆಗೆ ನಾವು 21 ಮೃತದೇಹಗಳನ್ನು ಹೊರತೆಗೆದಿದ್ದೇವೆ. ದೋಣಿಯಲ್ಲಿ ಎಷ್ಟು ಜನರು ಇದ್ದಾರೆ ಎಂಬುದು ನಮಗೆ ನಿಖರವಾಗಿ ತಿಳಿದಿಲ್ಲ. ಅದರಲ್ಲಿ ಎಷ್ಟು ಮಂದಿ ಇದ್ದಾರೆ ಎಂದು ಕಂಡುಹಿಡಿಯಲು ನಾವು ಹುಡುಕಾಟವನ್ನು ಮುಂದುವರೆಸಿದ್ದೇವೆ ಎಂದು ಪ್ರಾದೇಶಿಕ ಅಗ್ನಿಶಾಮಕ ದಳದ ಅಧಿಕಾರಿ ಶಿಜು ಕೆಕೆ ತಿಳಿಸಿದ್ದಾರೆ.
ಈ ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
Post a Comment