".

Header Ads

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ,ನಾಲ್ವರು ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

 


ಎಸ್‌ಎಸ್‌ಎಲ್‌ಸಿ ಫಲಿತಾಂಶ  ಪ್ರಕಟವಾಗಿದೆ. ಈ ಬಾರಿ ಶೇಕಡ 83.88 ಫಲಿತಾಂಶ ದಾಖಲಾಗಿದೆ. ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ ಪಡೆದಿದ್ದಾರೆ.

ಎಸ್‌ಎಸ್‌ಎಲ್‌ಸಿಯಲ್ಲಿ ಚಿತ್ರದುರ್ಗ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಶೇಕಡಾ 96.08ರಷ್ಟು ಫಲಿತಾಂಶ ದಾಖಲಾಗಿದೆ. ಎರಡನೇ ಸ್ಥಾನವನ್ನು ಮಂಡ್ಯ ಜಿಲ್ಲೆ ಮತ್ತು ಮೂರನೇ ಸ್ಥಾನವನ್ನು ಹಾಸನ ಜಿಲ್ಲೆ ಪಡೆದಿದೆ. ಈ ಬಾರಿಯೂ ವಿದ್ಯಾರ್ಥಿನಿಯರು ಮೇಲುಗೈ ಪಡೆದಿದ್ದಾರೆ. ನಾಲ್ವರು ವಿದ್ಯಾರ್ಥಿಗಳು ಶೇಕಡ 100 ಫಲಿತಾಂಶ ಪಡೆದಿದ್ದಾರೆ. ಭೂಮಿಕಾ ಪೈ, ಯಶಸ್‌ ಗೌಡ, ಅನುಮಮಾ ಶ್ರೀಶೈಲ, ಭೀಮನಗೌಡ ಹನುಮಂತಗೌಡ ಬಿರಾದಾರ ಪಾಟೀಲ ಶೇಕಡ 100 ಫಲಿತಾಂಶ ಪಡೆದಿದ್ದಾರೆ.
ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧ್ಯಕ್ಷ ಆರ್ ರಾಮಚಂದ್ರ, ಪರೀಕ್ಷಾಂಗ ನಿರ್ದೇಶಕ ಎಚ್ ಗೋಪಾಲಕೃಷ್ಣ ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಸಿಂಗ್ ಅವರು ಬೆಂಗಳೂರಿನಲ್ಲಿಂದು ಫಲಿತಾಂಶ ಪ್ರಕಟಿಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರು ಫಲಿತಾಂಶ ಪ್ರಕಟಿಸಲು ಮುಂದಾಗಿಲ್ಲ.

ಈ ಬಾರಿಯೂ ಬಾಲಕಿಯರೇ ಮೇಲುಗೈ ಪಡೆದಿದ್ದಾರೆ. 5,59,51 ಬಾಲಕಿಯರು ಮತ್ತು 3,41,108 ಉತ್ತೀರ್ಣರಾಗಿದ್ದಾರೆ.

Powered by Blogger.