".

Header Ads

ಉತ್ತರ ಕೊರಿಯಾದ ಗೂಢಚರ್ಯೆ ಉಪಗ್ರಹ‘ ಸಮುದ್ರ ಪಾಲು



ಉತ್ತರ ಕೊರಿಯಾ ಸರಕಾರ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ ಎಂದು ಉತ್ತರ ಕೊರಿಯಾ ಮಾಧ್ಯಮಗಳು ತಿಳಿಸಿವೆ.

ಮೊದಲು ಹಂತದಲ್ಲಿ ಉಪಗ್ರಹ ಯಶಸ್ವಿಯಾಗಿ ಆಕಾಶಕ್ಕೆ ಹಾರಿತು. ಆದರೆ ಎರಡನೇ ಹಂತದಲ್ಲಿ ಉಪಗ್ರಹ ರಾಕೆಟ್‌ನಿಂದ ಬೇರ್ಪಡುವಾಗ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಪರಿಣಾಮ ಅದು ಸಮುದ್ರದಲ್ಲಿ ಬಿದ್ದಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.


Powered by Blogger.