".

Header Ads

ಬೈಲೂರು:- ಕಸದಲ್ಲಿ ಸಿಕ್ಕಿದ ಉಂಗುರ ; ಹಿಂದಿರುಗಿಸಿ ಮಾನವೀಯತೆ ಮೆರೆದ ಮಹಿಳೆ


 ಪ್ರತಿದಿನ ಕಸ ನೀಡುವ ಮನೆಯವರ 2 ಗ್ರಾಂ ತೂಕದ ಚಿನ್ನ ಉಂಗುರ ಕಳೆದು ಹೋಗಿತ್ತು. ಈ ಬಗ್ಗೆ ಕಸ ವಿಲೇವಾರಿ ಘಟಕದವರಿಗೆ ಮಾಹಿತಿ ನೀಡಿ, ಕಸದ ಜೊತೆ ಬಂದಿದ್ದರೆ ನೀಡುವಂತೆ ವಿನಂತಿಸಿಕೊಂಡಿದ್ದರು. ಅದರಂತೆ ಬೈಲೂರು ಮೂಡುಬೈಲೂರಿನಲ್ಲಿ ಕಸ ವಿಲೇವಾರಿ ಮಾಡುವಾಗ ಕಸದಲ್ಲಿ ಚಿನ್ನದ ಉಂಗುರ ದೇವಕಿ ಅವರಿಗೆ ಸಿಕ್ಕಿತ್ತು. ಕೂಡಲೇ ಅವರು ಸಂಬಂಧಪಟ್ಟ ಮನೆಯವರಿಗೆ ಮಾಹಿತಿ ನೀಡಿ ವಾರೀಸುದಾರರಿಗೆ ಹಸ್ತಾಂತರಿಸಿದ್ದಾರೆ.

Powered by Blogger.