ಮದುವೆಯಾಗಲು ನಿರಾಕರಿಸಿದ್ದ ಪ್ರಿಯಕರನನ್ನ ರೂಮಿಗೆ ಕರೆಯಿಸಿಕೊಂಡು ಬಿಸಿ ನೀರು ಎರಚಿದ ಮಹಿಳೆ
ಪ್ರೀತಿ ಮಾಡಿ ಬೇರೆ ಯುವತಿ ಜೊತೆ ಮದುವೆಯಾಗಿ ಬಂದಿದ್ದ ಪ್ರಿಯಕರನ್ನು ಮಹಿಳೆ ಮನೆಗೆ ಕರೆಯಿಸಿಕೊಂಡು ಬಿಸಿ ನೀರು ಎರಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೇ 25 ರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ಕೆಲಸಕ್ಕೆ ಬಂದಿದ್ದ ಕಲಬುರಗಿ ಜಿಲ್ಲೆಯ ವಿಜಯಶಂಕರ ಆರ್ಯ ಹಾಗೂ ಅಫ್ಜಲ್ಪುರದ ದೇಸಾಯಿ ಕಲ್ಲೂರಿನ ಜ್ಯೋತಿ ದೊಡ್ಡಮನಿ ಎನ್ನುವ ಮಹಿಳೆ ಪರಿಚಯವಾಗಿದ್ದು, ಬಳಿಕ ಇಬ್ಬರ ಮಧ್ಯೆ ಪ್ರೀತಿ ಚಿಗುರೊಡೆದಿತ್ತು. ಆದ್ರೆ, ಇದೀಗ ವಿಜಯ್ ಜ್ಯೀತಿಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಇದರಿಂದ ಕುಪಿತಗೊಂಡ ಜ್ಯೋತಿ ನಿನ್ನ ಹತ್ತಿರ ಮಾತನಾಡಬೇಕು ಬಾ ಎಂದು ರೂಮಿಗೆ ಕರೆಯಿಸಿಕೊಂಡು ಬಿಸಿ ನೀರು ಎರಚಿದ್ದಾಳೆ. ಇದರಿಂದ ಪ್ರಿಯಕರ ವಿಜಯಶಂಕರಗೆ ಗಂಭಿರ ಗಾಯಗೊಂಡಿದ್ದಾನೆ.
Post a Comment