ಪಿಯುಸಿ ವಿಧ್ಯಾರ್ಥಿನಿ ಅತ್ಯಾಚಾರಗೈದ ಇಬ್ಬರು ಅಪರಾಧಿಗಳಿಗೆ 20 ವರ್ಷ ಕಾರಾಗೃಹ ಶಿಕ್ಷೆ
ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಪಿಯುಸಿ ವಿಧ್ಯಾರ್ಥಿನಿಯನ್ನು ಪುಸಲಾಯಿಸಿ ಅಪಹರಣ ಮಾಡಿ ಅತ್ಯಾಚಾರಗೈದಿರುವ ಇಬ್ಬರು ಅಪರಾಧಿಗಳಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ಎಫ್‌ಟಿಎಸ್‌ಸಿ-2 ನ್ಯಾಯಾಲಯವು 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಅತ್ಯಾಚಾರದ ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಕಾವಳಗದ್ದೆಯ ಸಚಿನ್ ಸಂತೋಷ್ ನಾಯ್ಕ (22) ಮತ್ತು ಹಟ್ಟಿಕೆರೆಯ ಪ್ರವೀಣ್ ಜಯಪಾಲ್ ನಾಯ್ಕ (33) ಎಂದು ಗುರುತಿಸಲಾಗಿದೆ.

Post a Comment