".

Header Ads

ಒಡಿಶಾ ದಲ್ಲಿ ಭೀಕರ ರೈಲು ಅಪಘಾತ : ಸಾವಿನ ಸಂಖ್ಯೆ 233ಕ್ಕೆ ಏರಿಕೆ, 900 ಮಂದಿ ಗಾಯ


ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್‌ನಲ್ಲಿ ಹಳಿತಪ್ಪಿದ ರೈಲಿನ ಬೋಗಿಗಳಿಗೆ ಮತ್ತೊಂದು ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದು 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು 900 ಜನರು ಗಾಯಗೊಂಡಿದ್ದಾರೆ. ಮೂರನೇ ಸರಕು ಸಾಗಣೆ ರೈಲು ಕೂಡ ಅಪಘಾತದಲ್ಲಿ ಸಿಲುಕಿದೆ ಎಂದು ವರದಿಯಾಗಿದೆ. 

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿನ ಅತ್ಯಂತ ಮಾರಣಾಂತಿಕ ಅಪಘಾತಗಳಲ್ಲಿ ಒಂದಾದ ಈ ಅಪಘಾತದಲ್ಲಿ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಸೇರಿವೆ.


ಇತ್ತೀಚಿನ ವರದಿಯನ್ನು ಉಲ್ಲೇಖಿಸಿ ಒಡಿಶಾ ಮುಖ್ಯ ಕಾರ್ಯದರ್ಶಿ, ಕೋಲ್ಕತ್ತಾದಿಂದ ದಕ್ಷಿಣಕ್ಕೆ 250 ಕಿಮೀ ಮತ್ತು ಭುವನೇಶ್ವರದಿಂದ 170 ಕಿಮೀ ಉತ್ತರಕ್ಕಿರುವ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ 233 ಮಂದಿ ಸಾವಿಗೀಡಾಗಿದ್ದು, ಸುಮಾರು 900 ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. 

ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಸಮೀಪದ ಜಿಲ್ಲೆಗಳ ಎಲ್ಲಾ ಆಸ್ಪತ್ರೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೂರು ಎನ್‌ಡಿಆರ್‌ಎಫ್ ಘಟಕಗಳು, 4 ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆಗಳು, 15ಕ್ಕೂ ಹೆಚ್ಚು ಅಗ್ನಿಶಾಮಕ ರಕ್ಷಣಾ ತಂಡಗಳು, 30 ವೈದ್ಯರು, 200 ಪೊಲೀಸ್ ಸಿಬ್ಬಂದಿ ಮತ್ತು 60 ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ತಿಳಿಸಿದ್ದಾರೆ.

Powered by Blogger.