".

Header Ads

ನಿಂತಿದ್ದ ರೈಲಿನಲ್ಲಿ ಬೆಂಕಿ – ಕಿಡಿಗೇಡಿಗಳ ಕೃತ್ಯದ ಶಂಕೆ


  ಸ್ಟೇಷನ್‌ನಲ್ಲಿ ನಿಂತಿದ್ದ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿರುವುದು ವರದಿಯಾಗಿದೆ.ಗುರುವಾರ ಮುಂಜಾನೆ ರೈಲು ಕಣ್ಣೂರು ಸ್ಟೇಷನ್‌ ನಲ್ಲಿ ನಿಂತಿದ್ದ ವೇಳೆ ರೈಲಿನ ಒಂದು ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಮಾಹಿತಿ ತಿಳಿದ ಕೂಡಲೇ ರೈಲ್ವೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿ ಕಾಣಿಸಿಕೊಂಡ ರೈಲಿನ ಇತರ ಬೋಗಿಗಳನ್ನು ಬೇರ್ಪಡಿಸಿ ಬೆಂಕಿಯನ್ನು ಹತೋಟಿಗೆ ತಂದರು. ಆದರೆ, ಕೋಚ್ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಆದರೆ ಯಾವುದೇ ಜೀವ ಅಪಾಯ ಸಂಭವಿಸಿರಲಿಲ್ಲಈ ಕುರಿತು ಪೊಲೀಸರು ಪಕ್ಕದಲ್ಲಿದ್ದ ಸಿಸಿಟಿವಿಯನ್ನು ಪರಿಶೀಲನೆ ಮಾಡಿದ್ದು, ಅಪರಿಚಿತ ವ್ಯಕ್ತಿಯೊಬ್ಬ ರೈಲಿನೊಳಗೆ ಪ್ರವೇಶಿಸಿದ ಬಳಿಕ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಹೀಗಾಗಿ ಹೆಚ್ಚಿನ ತನಿಖೆ ನಡೆಯುತ್ತಿದೆ
ಈ ಪ್ರಕರಣಕ್ಕೆ ಸಂಬಂಧಿಸಿ ಉನ್ನತಮಟ್ಟದಲ್ಲಿ ತನಿಖೆ ನಡೆಯುತ್ತಿದೆ.

Powered by Blogger.