".

Header Ads

ಖಾಸಗಿ ಬಸ್ ಸ್ಕೂಟಿ ಮುಖಾಮುಖಿ ಡಿಕ್ಕಿ- ಯುವಕ ದಾರುಣ ಸಾವು!

 


ಕಾರ್ಕಳ ತಾಲೂಕಿನ ಬೈಲೂರು ಥೀಮ್ ಪಾರ್ಕ್ ಸಮೀಪ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಬೈಲೂರು ಕೆಳಪೇಟೆಯಲ್ಲಿ ಬಸ್ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಜಾರ್ಕಳ ನಿವಾಸಿ ಕಾರ್ತಿಕ್ (26) ಮೃತ ದುರ್ದೈವಿ.

ಗುರುವಾರ ರಾತ್ರಿ ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಬೈಲೂರಿನಿಂದ ಜಾರ್ಕಳ ಕಡೆಗೆ ಸಾಗುತ್ತಿದ್ದ ಸ್ಕೂಟಿ ಮಧ್ಯೆ ಡಿಕ್ಕಿ ಹೊಡೆದಿದ್ದು, ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಕೂಲಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಕೆಲಸ ಮುಗಿಸಿ ಮನೆಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತರು ಪತ್ನಿ ಮತ್ತು ಪುಟ್ಟ ಮಗುವನ್ನು ಅಗಲಿದ್ದಾರೆ.ಅಪಘಾತ ನಡೆದ ಸ್ಥಳದಲ್ಲಿ ಕೆಲಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತು. ಘಟನಾ ಸ್ಥಳಕ್ಕೆ ಕಾರ್ಕಳ ನಗರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.

Powered by Blogger.