ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಹಲವು ನಿಬಂಧನೆಗಳು
ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳಲ್ಲೊಂದಾದ ಮಹಿಳೆಯರಿಗೆ ಉಚಿತ ಬಸ್ ಸೇವೆ ಗೆ ಹಲವು ನಿಬಂಧನೆಗಳನ್ನು ಹೇರಲಾಗಿದೆ.
ಎಸಿ ಬಸ್, ಡೀಲಕ್ಸ್ ಬಸ್ ಗಳನ್ನು ಹೊರತುಪಡಿಸಿ ಸಾಮಾನ್ಯ ಬಸ್ ಗಳಲ್ಲಿ ಎಲ್ಲಾ ವರ್ಗಗಳ ಮಹಿಳೆಯರು ಕರ್ನಾಟಕ ರಾಜ್ಯದೊಳಗೆ ಎಲ್ಲಿ ಬೇಕಾದರೂ ಸಂಚರಿಸಬಹುದಾಗಿದೆ. ಕರ್ನಾಟಕದ ಮಹಿಳೆಯರಿಗೆ ಮಾತ್ರ ಈ ನಿಯಮ ಅನ್ವಯವಾಗುತ್ತದೆ.
ಕರ್ನಾಟಕದೊಳಗೆ ಸಂಚರಿಸುವ ಬಸ್ಸುಗಳಲ್ಲಿ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಅನ್ಯ ರಾಜ್ಯಗಳ ಮಹಿಳೆಯರಿಗೆ, ಹೊರರಾಜ್ಯಗಳಿಗೆ ಹೋಗುವ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ.
ಬಸ್ ಗಳಲ್ಲಿ ಪ್ರಯಾಣಿಸಲು ಪ್ರತ್ಯೇಕ ಪಾಸ್ ನೀಡಲಾಗುವುದಿಲ್ಲ . ಪ್ರತ್ಯೇಕ ಪಾಸ್ ಗಳ ಬದಲಿಗೆ, ಮಹಿಳೆಯರು ತಮ್ಮ ಭಾವಚಿತ್ರ ಹಾಗೂ ವಿಳಾಸ ದೃಢೀಕರಣಗೊಳಿಸುವ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿಯನ್ನು ತೋರಿಸಿ ಪ್ರಯಾಣಿಸಬಹುದಾಗಿದೆ.
ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ (ಕೆಎಸ್ಆರ್ ಟಿಸಿ) ಸಾಮಾನ್ಯ ಬಸ್ ಗಳಲ್ಲಿ ಮಾತ್ರ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿರಲಿದೆ. ಅಂದರೆ, ಕೆಎಸ್ಆರ್ ಟಿಸಿಯ ಹವಾನಿಯಂತ್ರಿತ ಬಸ್ ಗಳಲ್ಲಿ (ಎ.ಸಿ. ಬಸ್ ಗಳಲ್ಲಿ) ಹಾಗೂ ಡಿಲಕ್ಸ್ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಇರುವುದಿಲ್ಲ.
ಕರ್ನಾಟಕದಲ್ಲಿ ವಾಸವಿರುವ ಮಹಿಳೆಯರಿಗಷ್ಟೇ ಅವಕಾಶವಿದ್ದು ಹೊರರಾಜ್ಯಗಳಿಂದ ಬರುವ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶವಿಲ್ಲ. ಹೊರ ರಾಜ್ಯದಿಂದ ಕರ್ನಾಟಕಕ್ಕೆ ಸಂಬಂಧಿಕರ ಮನೆಗೋ ಅಥವಾ ಪ್ರವಾಸಕ್ಕೋ ಬರುವಂಥ ಮಹಿಳೆಯರಿಗೆ ಈ ಸೌಲಭ್ಯ ಅನ್ವಯವಾಗುವುದಿಲ್ಲ.
ಅನ್ಯ ರಾಜ್ಯಗಳ ಊರುಗಳಿಗೆ ಹೋಗುವ ಬಸ್ ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವು ಅನ್ವಯಿಸುವುದಿಲ್ಲ.
ಕೆಎಸ್ ಆರ್ ಟಿಸಿಯ ಅಡಿಯಲ್ಲಿ ಕರ್ನಾಟಕದ ನಾಲ್ಕು ಪ್ರಾಂತ್ಯಗಳಲ್ಲಿ ನಾಲ್ಕು ಸಾರಿಗೆ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು (ಈಶಾನ್ಯ ಸಾರಿಗೆ, ವಾಯುವ್ಯ ಸಾರಿಗೆ ಇತ್ಯಾದಿ) ಅವುಗಳಲ್ಲಿನ ಸಾಮಾನ್ಯ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

Post a Comment