ಉಚ್ಚಿಲ ಬಟ್ಟಪ್ಪಾಡಿಯಲ್ಲಿ ತಾತ್ಕಾಲಿಕ ಕಾಮಗಾರಿ ನಡೆಯುತ್ತಿದ್ದರೂ ಸಮುದ್ರದ ಸಮುದ್ರದ ಅಲೆಗಳು ತೀರದ ಮನೆಗಳಿಗೆ ಅಪ್ಪಳಿಸುತ್ತಿದ್ದು ತೀರದ ಪ್ರದೇಶದ ಮರ ಗಿಡಗಳು, ಅನೇಕ ಮನೆಗಳು, ರಸ್ತೆ ಸಮುದ್ರ ಪಾಲಾಗುತ್ತಿದೆ. ಇನ್ನು ಉಳ್ಳಾಲದ ತೀರದ ಪ್ರದೇಶಗಳಾದ ಕೈಕೋ , ಮೊಗವೀರಪಟ್ಣ, ಸೋಮೇಶ್ವರ ಪ್ರದೇಶದಲ್ಲಿ ಸಮುದ್ರದ ಅಲೆಗಳು ದಡಕ್ಕಪ್ಪಳಿಸುತ್ತಿದೆ.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಸ್ಥಳಿಯ ಶಾಸಕ, ವಿಧಾನ ಸಭಾ ಸಭಾಪತಿ ಯು ಟಿ ಖಾದರ್ ಈ ಪ್ರದೇಶಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದು ಬಟ್ಟಪ್ಪಾಡಿಯಲ್ಲಿ ಕಡಲ್ಕೊರೆತ ತಡೆಗೆ ಮುಂದಿನ ವರ್ಷದಿಂದಲೇ ಶಾಶ್ವತ ಕಾಮಗಾರಿ ಕೈಗೊಳ್ಳುವ ಭರವಸೆ ನೀಡಿದ್ದಾರೆ.
Post a Comment