".

Header Ads

ರೈಲು ದುರಂತ: ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಸಂಭವಿಸಿದ ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲಿನ ನಡುವೆ  ಭೀಕರ ರೈಲು ಅಪಘಾತದ ಸ್ಥಳಕ್ಕೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಬಾಲಸೋರ್ ಆಗಮಿಸಿ, ಅಲ್ಲಿಂದ ಬಹನಾಗಾ ಬಜಾರ್ ನಿಲ್ದಾಣದಲ್ಲಿ ನಡೆದ ಅಪಘಾತ ಸ್ಥಳಕ್ಕೆ ಭೇಟಿ ನೀಡಿದರು.

ಪ್ರಧಾನಿ ಮೋದಿಗೆ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಹಿರಿಯ ಅಧಿಕಾರಿಗಳು ಸಾಥ್ ನೀಡಿದರು. ಘಟನಾ ಸ್ಥಳದಲ್ಲಿ ಅಧಿಕಾರಿಗಳು ಮತ್ತು ರಕ್ಷಣಾ ಸಿಬ್ಬಂದಿಯಿಂದ ಪ್ರಧಾನಿ ಮೋದಿ ಮಾಹಿತಿ ಪಡೆದುಕೊಂಡರು.

Powered by Blogger.