".

Header Ads

ಬಿಟ್ಟಿ ಭಾಗ್ಯ :- ಶಕ್ತಿ ಯೋಜನೆ ಜಾರಿಗೆ ತಂದ ಜೋಶ್​​ನಲ್ಲಿದ್ದ ಸಾರಿಗೆ ಇಲಾಖೆಗೆ ಶಾಕ್! ,ಗ್ರಾಹಕರಿಗೆ ವಿದ್ಯುತ್‌ ದರ ಏರಿಕೆ ಬಳಿಕ ವಾಟರ್ ಬಿಲ್ ಶಾಕ್‌



ಆರ್ಥಿಕ ಇಲಾಖೆಯ ಆದೇಶ ನೋಡಿ ಸಾರಿಗೆ ಇಲಾಖೆ ಶಾಕ್ :-

ಸಾರಿಗೆ ಇಲಾಖೆ ಮನವಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ಸಾರಿಗೆ ಇಲಾಖೆ ಮಾಡಿದ ಮನವಿ ಏನು ಎಂಬುದರ ಮಾಹಿತಿ ಇಲ್ಲಿದೆ.
ಸಾರಿಗೆ ನಿಗಮಗಳ ವೇತನ ಪರಿಷ್ಕರಣೆಯ ಹೆಚ್ಚುವರಿ ವೆಚ್ಚಕ್ಕೆ ವಿಶೇಷ ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸಾರಿಗೆ ಇಲಾಖೆ ಎಲ್ಲಾ ನಿಗಮಗಳು ಮನವಿ ಮಾಡಿಕೊಂಡಿದ್ದವು.ಆದರೆ ಸಾರಿಗೆ ನಿಗಮಗಳ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ಹೆಚ್ಚುವರಿ ಅನುದಾನ ಒದಗಿಸಲು ಸಾಧ್ಯವಿಲ್ಲ ಎಂದು ಆರ್ಥಿಕ ಇಲಾಖೆ ಪ್ರಸ್ತಾವನೆಯಲ್ಲಿ ತಿರಸ್ಕರಿಸಿದೆ.ವೇತನ ಪಾವತಿ- ಇಂಧನ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ ಒದಗಿಸಲು ಅವಕಾಶ ಇಲ್ಲ. ಸಾರಿಗೆ ನಿಗಮಗಳು ತಮ್ಮ ಆಂತರಿಕ ಸಂಪನ್ಮೂಲಗಳಿಂದಲೇ ಭರಿಸಿಕೊಳ್ಳುವಂತೆ ಸರ್ಕಾರದ ಸ್ಪಷ್ಟ ಸೂಚನೆ ನೀಡಿದೆ.ಇನ್ನು ಮುಂದೆಯೂ ವೇತನ ಪಾವತಿಗಾಗಿ, ಇಂಧನ ವೆಚ್ಚಕ್ಕಾಗಿ ಅನುದಾನ ಒದಗಿಸಲು ಸಾಧ್ಯ ಇಲ್ಲ ಎಂದು ಎಲ್ಲಾ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಸೂಚನೆ ನೀಡಲಾಗಿದೆ.

ಜೂನ್‌ ತಿಂಗಳಲ್ಲಿ ಬಂದಿರುವ ವಾಟರ್ ಬಿಲ್ ಏಕಾಏಕಿ ಡಬಲ್‌ ಆಗಿದೆ.

ಕೆಲ ಮನೆಗಳಿಗೆ ಬಂದಿರುವ ನೀರಿನ ಬಿಲ್‌ ಮೂರ‍್ನಾಲ್ಕು ಪಟ್ಟು ಹೆಚ್ಚಾಗಿದೆ. ಇದು ಬೇಕಂತಲೇ ಮಾಡಿದ್ದಾರೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರಿನ ಕೆಲವು ಮನೆಗಳಲ್ಲಿ ಏಕಾಏಕಿ ಮನೆಯ ನೀರಿನ ಬಳಕೆಯ ಬಿಲ್ ಡಬಲ್, ತ್ರಿಬಲ್ ಆಗಿದೆ. ಹೀಗೆ ಹಲವು ರೀತಿಯಲ್ಲಿ ಬೆಲೆ ಏರಿಕೆ ಬಾಣ ಜನರಿಗೆ ಚುಚ್ಚುತ್ತಿದೆ. ಸರ್ಕಾರ ಒಂದು ಕೈನಲ್ಲಿ ಕೊಟ್ಟು ಮತ್ತೊಂದು ಕೈನಲ್ಲಿ ಕಿತ್ತುಕೊಳ್ತಿದೆಯಾ ಅನ್ನೋ ಆರೋಪ ಕೂಡಾ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಏಕಾಏಕಿ ನೀರಿನ ಶುಲ್ಕ ಹೆಚ್ಚಳ ಆಗಿದೆ. ಇದರಿಂದಾಗಿ ಸಾರ್ವಜನಿಕರು ಕಂಗಾಲಾಗಿದ್ದಾರೆ. ಕಳೆದ ತಿಂಗಳು 930 ರೂ. ಬಂದಿತ್ತು, ಈ ತಿಂಗಳು ಏಕಾಏಕಿ 3,000 ದಾಟಿದೆ. ವಯಾಲಿಕಾವಲ್ ಬಳಿ ಒಂದೇ ರಸ್ತೆಯ ಹತ್ತಾರು ಮನೆಗಳಲ್ಲಿ ನೀರಿನ ಬಿಲ್ ಡಬಲ್ ಆಗಿರೋದು ನೋಡಿ ಜನ ಶಾಕ್ ಆಗಿದ್ದಾರೆ. ಉಚಿತ ಭಾಗ್ಯ ಅಂತ ಈ ರೀತಿ ಮಾಡಿದ್ದಾರೆ ಎಂದು ಜಲಮಂಡಳಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.




Powered by Blogger.