".

Header Ads

ಬ್ರಿಜ್ ಭೂಷಣ್ ವಿರುದ್ದ ಸುಳ್ಳು ಪ್ರಕರಣ ; ಕುಸ್ತಿಪಟುವಿನ ತಂದೆಯಿಂದ ಅಚ್ಚರಿ ಹೇಳಿಕೆ !


ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಅಪ್ರಾಪ್ತ ಕುಸ್ತಿಪಟುವಿನ ತಂದೆ  WFI ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ದ ಸುಳ್ಳು ಪ್ರಕರಣ ದಾಖಲಿಸಲಾಗಿದೆ  ಎಂಬುದಾಗಿ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಬ್ರಿಜ್ ಭೂಷಣ್ 'ಷ್ಪಕ್ಷಪಾತವಾಗಿ' ವರ್ತಿಸಿದ ನಂತರ ಮುಖ್ಯಸ್ಥನ ವಿರುದ್ಧ ಕಿರುಕುಳ ಆರೋಪ ಹೊರಿಸಲಾಯಿತು . '2022 ರ ಏಷ್ಯನ್ ಚಾಂಪಿಯನ್‌ಶಿಪ್‌ನ ಅಂತಿಮ ಟ್ರಯಲ್ಸ್‌ಗೆ ತನ್ನ ಮಗಳು ಅರ್ಹತೆ ಪಡೆಯಲು ವಿಫಲವಾದ ನಂತರ ಬ್ರಿಜ್ ಭೂಷಣ್ ವಿರುದ್ಧ ಕೋಪಗೊಂಡಿದ್ದೆ. ಅಂತೆಯೇ ಬ್ರಿಜ್ ಭೂಷಣ್ ನನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿಲ್ಲ.. ಆದರೆ ಅವರ ವಿಧಾನವು ಅವಳ ವಿರುದ್ಧ ಸಂಪೂರ್ಣವಾಗಿ ಪಕ್ಷಪಾತದಿಂದ ಕೂಡಿತ್ತು. ಇದೇ ಕಾರಣದಿಂದ ಲಕ್ನೋದಲ್ಲಿ ನಡೆದ 2022 ರ ಅಂಡರ್ 17 ಏಷ್ಯನ್ ಚಾಂಪಿಯನ್‌ಶಿಪ್ ಟ್ರಯಲ್ಸ್‌ನಲ್ಲಿ ಸೋತರು. ತೀರ್ಪುಗಾರರ ಒಂದು ತಪ್ಪು ನಿರ್ಧಾರದಿಂದ ನನ್ನ ಮಗಳ ಒಂದು ವರ್ಷದ ಶ್ರಮ ವ್ಯರ್ಥವಾಯಿತು. ಇದು ನಿಯಮಗಳಿಗೆ ವಿರುದ್ಧವಾಗಿದೆ, ನನ್ನ ಮಗಳು ಪಂದ್ಯ ಆಡಿದ ಆಟಗಾರ್ತಿ ಸೇರಿದಂತೆ ಎಲ್ಲಾ ಸಿಬ್ಬಂದಿ ದೆಹಲಿಯಿಂದ ಬಂದವರು.. ಇದರಿಂದಲೇ ತನ್ನ ಮಗಳು ಸೋಲಬೇಕಾಯಿತು ಎಂಬುದಾಗಿ ಹೇಳಿ ಅಪ್ರಾಪ್ತೆಯ ತಂದೆ ಅಚ್ಚರಿ ಮೂಡಿಸಿದ್ದಾರೆ.

ಒಬ್ಬ ಅಪ್ರಾಪ್ತ ಬಾಲಕಿ ಸೇರಿದಂತೆ 7 ಮಹಿಳಾ ಕುಸ್ತಿಪಟುಗಳು ನೀಡಿರುವ ಲೈಂಗಿಕ ಕಿರುಕುಳದ ಆರೋಪದ ಮೇಲೆ ಡಬ್ಲ್ಯುಎಫ್‌ಐ ಮುಖ್ಯಸ್ಥರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಪ್ರಾಪ್ತ ಕುಸ್ತಿಪಟು ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಪ್ರಕರಣವನ್ನು ದಾಖಲಿಸಲಾಗಿದೆ.

Powered by Blogger.