ನಾಗದೇವತೆ ಸಿನಿಮಾ ಖ್ಯಾತಿಯ ನಟ ಕಜನ್ ಹೃದಯಾಘಾತದಿಂದ ನಿಧನ
ಕನ್ನಡಲ್ಲಿ ಹಬ್ಬ, ಗ್ರಾಮದೇವತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ದಕ್ಷಿಣದ ಖ್ಯಾತ ಖಳನಟ ಕಜನ್ ಖಾನ್ ನಿಧನರಾಗಿದ್ದಾರೆ. ನಿನ್ನೆ ಅವರಿಗೆ ಹೃದಯಾಘಾತವಾಗಿದ್ದು , ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.
ಕನ್ನಡ, ತಮಿಳು, ಮಲಯಾಳಂ ಸಿನಿಮಾ ರಂಗದಲ್ಲಿ ವಿಲನ್ ಪಾತ್ರದ ಮೂಲಕವೇ ಗುರುತಿಸಿಕೊಂಡಿದ್ದ ಕಜನ್ ಖಾನ್, ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದರು. ಅಗಲಿದ ನಟನಿಗೆ ಅನೇಕ ತಾರೆಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಹಠಾತ್ ನಿಧನ ಚಿತ್ರರಂಗಕ್ಕೆ ಆಘಾತ ಮೂಡಿಸಿದೆ.
Post a Comment