".

Header Ads

ಮಗಳ ಬಳಿ ನಿದ್ರೆ ಮಾತ್ರೆ ಕೊಟ್ಟು ಸಾಯಿಸುವಂತೆ ಹೇಳಿದ ತಾಯಿ , ಹೆತ್ತ ತಾಯಿಯನ್ನು ಕೊಂದು ಸೂಟ್ ಕೇಸ್​ನಲ್ಲಿ ಶವವನ್ನು ಪೊಲೀಸ್​ ಠಾಣೆಗೆ ತಂದ ಪುತ್ರಿ..!

 


ಹೆತ್ತ ತಾಯಿಯನ್ನು ಕೊಂದು ಸೂಟ್​ಕೇಸ್​ನಲ್ಲಿ ಶವವಿಟ್ಟು ಪೊಲೀಸ್​ ಠಾಣೆಗೆ ಹೊತ್ತು ತಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.ಮಗಳು ಸೇನಾಲಿ ಸೇನ್​ ಎಂಬಾಕೆ ತಾಯಿ ಬೀವಾ ಪಾಲ್ (70) ಎಂಬಾಕೆಯನ್ನು ಕೊಲೆ ಮಾಡಿ, ಸೂಟ್​ಕೇಸ್​ನಲ್ಲಿ ತಂದೆಯ ಫೋಟೋ ಜತೆಗೆ ತಾಯಿ ಶವವಿಟ್ಟು, ಮೈಕೊಲೇಔಟ್ ಪೊಲೀಸ್ ಠಾಣೆಗೆ ಹೊತ್ತು ತಂದು ಶರಣಾಗಿದ್ದಾಳೆ.

ಈ ಪ್ರಕರಣದ ವಿಚಾರಣೆ ವೇಳೆ ಸೆನಾಲಿ ಸೇನ್​ ಮತ್ತಷ್ಟು ಮಾಹಿತಿಯನ್ನು ಬಿಚ್ಚಿಟ್ಟಿದ್ದಾಳೆ. ತಾಯಿಯೇ ಮಗಳ ಬಳಿ ನಿದ್ರೆ ಮಾತ್ರೆ ಕೊಟ್ಟು ಸಾಯಿಸುವಂತೆ ಹೇಳಿದಳು ಎಂಬ ಅಂಶ ಬೆಳಕಿಗೆ ಬಂದಿದೆ. ಕೆಲವು ವರ್ಷಗಳ ಹಿಂದೆ ಸೆನಾಲಿ ತಂದೆ ತೀರಿ ಹೋಗಿದ್ದಾರೆ. ನೀನು ನನ್ನ ತಂದೆ ಬಳಿ ಹೋಗು, ನಾನು ಜೈಲಿಗೆ ಹೋಗ್ತೀನಿ ಎಂದು ಕೊಲೆ ಮಾಡುವ ಮುಂಚೆಯೇ ತಾಯಿ-ಮಗಳು ಮಾತನಾಡಿದ್ದರು ಎಂಬ ಸಂಗತಿ ಬಯಲಾಗಿದೆ.

ಮಾನಸಿಕವಾಗಿ ಕುಗ್ಗಿ ಹೋಗಿದ್ದಳು: ಆರೋಪಿ ಸೆನಾಲಿ ಸೇನ್, ತಾಯಿ ಬೀವಾ ಪಾಲ್​ ಮತ್ತು ಸೆನಾಲಿ ಅತ್ತೆ ಒಂದೇ ಮನೆಯಲ್ಲಿ ವಾಸವಿದ್ದರು. ಇಬ್ಬರು ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದರಂತೆ. ತಾಯಿ ಮತ್ತು ಅತ್ತೆ ಜಗಳದಿಂದ ಬೇಸತ್ತು ಸೆನಾಲಿ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು. ಸೇನಾಲಿ ಮಗನಿಗೂ ಕೂಡ ಮಾನಸಿಕ ತೊಂದರೆ ಕಾಡುತ್ತಿತ್ತು. ಒಂದು ಕಡೆ ಮಗನ ಚಿಂತೆ, ಇನ್ನೊಂದು ಕಡೆ ಅತ್ತೆ-ತಾಯಿಯ ಜಗಳ. ಇದರಿಂದ ಜೀವನದಲ್ಲಿ ಬೇಸತ್ತು ಹೋಗಿದ್ದ ಸೆನಾಲಿ ಈ ದುಷ್ಕ್ರತ್ಯ ಎಸಗಿದ್ದಾಳೆ.

 ತಾಯಿಯನ್ನು ಕೊಲೆ ಮಾಡಿ ಉಬರ್ ಮುಖಾಂತರ ಆಟೋ ಬುಕ್ ಮಾಡಿ ಠಾಣೆಗೆ ಬಂದು ಸೆನಾಲಿ ಶರಣಾಗಿದ್ದಾಳೆ

Powered by Blogger.