".

Header Ads

ಲೈಂಗಿಕ ಕಿರುಕುಳ : ಬ್ರಿಜ್ ಭೂಷಣ್ ವಿರುದ್ಧ ಮುಂದುವರೆದ ಪ್ರತಿಭಟನೆ

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಕುಸ್ತಿಪಟುಗಳು, ಪಟ್ಟು ಬಿಡದೆ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಈ ನಡುವಲ್ಲೇ ಕೇಂದ್ರ ಸರ್ಕಾರ ಕುಸ್ತಿಪಟುಗಳನ್ನು ಮತ್ತೊಮ್ಮೆ ಮಾತುಕತೆಗೆ ಆಹ್ವಾನ ನೀಡಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು, ಕುಸ್ತಿಪಟುಗಳೊಂದಿಗೆ ಅವರ ಸಮಸ್ಯೆಗಳನ್ನು ಚರ್ಚಿಸಲು ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ.

ಕುಸ್ತಿಪಟುಗಳ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ. ಈ ಕುರಿತು ಮಾತುಕತೆ ನಡೆಸಲು ಮತ್ತೊಮ್ಮೆ ಕುಸ್ತಿಪಟುಗಳನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.


Powered by Blogger.