".

Header Ads

ಸಂಸತ್ ಸದಸ್ಯತ್ವಕ್ಕೆ ಬ್ರಿಟನ್ ಮಾಜಿ ಪ್ರಧಾನಿ ರಾಜೀನಾಮೆ

ಬ್ರಿಟನ್‌ ನ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್, ಹಠಾತ್ತಾಗಿ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಕೋವಿಡ್ ಪಿಡುಗಿನ ಹಿನ್ನೆಲೆಯಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ, ಸಂತೋಷಕೂಟಗಳನ್ನು ಆಯೋಜಿಸಿದ್ದ ಬಗ್ಗೆ ಮಾಜಿ ಪ್ರಧಾನಿ ಸಂಸತ್‌ಗೆ ತಪ್ಪು ಮಾಹಿತಿ ನೀಡಿದ್ದರು ಎಂಬ ಆರೋಪದ ಕುರಿತಾಗಿ ತನಿಖೆ ನಡೆಯುತ್ತಿದೆ.

ನಾನು ಸುಳ್ಳು ಹೇಳಿಲ್ಲ, ತಮ್ಮ ವಿರುದ್ಧ ಪಿತೂರಿ ನಡೆದಿದೆ ಎಂದು 58 ವರ್ಷದ ಬೋರಿಸ್ ಜಾನ್ಸನ್ ಬಿಡುಗಡೆ ಮಾಡಿರುವ ಪ್ರಕಟಣೆ ಹೇಳಿದೆ. ತನಿಖಾ ಸಂಸ್ಥೆಯು ಸತ್ಯಾಂಶವನ್ನು ಪರಿಗಣಿಸದೇ ಯಾವುದೇ ಪುರಾವೆಯಿಲ್ಲದೆ ನನ್ನನ್ನು ತಪ್ಪಿತಸ್ಥನೆಂದು ಸಾಬೀತು ಮಾಡಲು ಹೊರಟಿದೆ ಎಂದು ದೂರಿದ್ದಾರೆ.

ಈ ಪಾರ್ಟಿಗೇಟ್ ಹಗರಣದಲ್ಲಿ ಬೋರಿಸ್ ಜಾನ್ಸನ್ ವಿರುದ್ಧ ಸಂಸದೀಯ ಸಮಿತಿಯಿಂದ ವರದಿ ಸಲ್ಲಿಕೆಯಾಗಲಿದ್ದು, ಶಿಕ್ಷೆಗೆ ಗುರಿಯಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.ಈ ವರದಿ ಬಿಡುಗಡೆಗೆ ಮೊದಲೇ ಜಾನ್ಸನ್ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.


Powered by Blogger.