".

Header Ads

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಗೃಹ ಸಚಿವ ಡಾ. ಜಿ ಪರಮೇಶ್ವರ್ ಭೇಟಿ ; ಕಾಂಗ್ರೆಸ್ ಕಾರ್ಯಕರ್ತರ ವತಿಯಿಂದ ಸನ್ಮಾನ



ಕೊಲ್ಲೂರು ಕಾಂಗ್ರೆಸ್ ಕಾರ್ಯಕರ್ತರ ವತಿಯಿಂದ ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಸನ್ಮಾನ್ಯ ಡಾ. ಜಿ ಪರಮೇಶ್ವರ್ ಅವರನ್ನು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಈ ವೇಳೆ ಕೊಲ್ಲೂರು ಕಾಂಗ್ರೆಸ್ ಸಮಿತಿ  ವತಿಯಿಂದ ಕೊಲ್ಲೂರು ದೇವಳಕ್ಕೆ ಖಾಯಂ ಪೊಲೀಸರನ್ನು ನಿಯೋಜನೆ ಮಾಡುವಂತೆ ಮನವಿ ಸಲ್ಲಿಸಲಾಯಿತು ಹಾಗೂ ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕೆಂದು ಗೃಹ ಸಚಿವರಲ್ಲಿ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ. ರಮೇಶ್ ಗಾಣಿಗ, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಗ್ರೀಷ್ಮಾ ಗಿರಿಧರ್ ಭಿಡೆ, ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಪೂಜಾರಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಯಪ್ರಕಾಶ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ವಾಸು, ವಿನಾಯಕ ಆಚಾರ್ಯ, ಚಂದ್ರ ಬಳೆಗಾರ, ಹರೀಶ್ ಸಿ ವಿ ಉಪಸ್ಥಿತರಿದ್ದರು.

Powered by Blogger.