".

Header Ads

ಪಾದಯಾತ್ರೆ ವೇಳೆ ನಿಯಮ ಉಲ್ಲಂಘನೆ: ಡಿಕೆಶಿ ವಿರುದ್ಧದ ಪ್ರಕರಣ ರದ್ದು

ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಜಾರಿಗೆ ಆಗ್ರಹಿಸಿ ನಡೆದ ಪಾದಯಾತ್ರೆ ವೇಳೆ ಕೊರೋನಾ ನಿಯಮ ಉಲ್ಲಂಘಿಸಿದ ಮತ್ತು ಸಾಂಕ್ರಾಮಿಕ ರೋಗಗಳ ಹರಡುವಿಕೆ ಆರೋಪದಡಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಪ್ರಕರಣ ರದ್ದುಪಡಿಸುವಂತೆ ಕೋರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪುರಸ್ಕರಿಸಿದೆ.

 ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ನೈಸರ್ಗಿಕ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕನಕಪುರ ಟೌನ್ ಠಾಣಾ ಪೊಲೀಸರು ಮತ್ತು ಬೆಂಗಳೂರಿನ ಹಲಸೂರು ಠಾಣಾ ಪೊಲೀಸರು ದಾಖಲಿಸಿದ್ದ ಎರಡು ಪ್ರತ್ಯೇಕ ಪ್ರಕರಣಗಳ ಮುಂದಿನ ಕಾನೂನು ಪ್ರಕ್ರಿಯೆಗೆ ನ್ಯಾಯಪೀಠ ಇದೇ ವೇಳೆ ತಡೆ ನೀಡಿದ್ದು ವಿಚಾರಣೆ ಮುಂದೂಡಿದೆ.

Powered by Blogger.