".

Header Ads

ಚಾರ್ಮಾಡಿ ಘಾಟಿಯಲ್ಲಿ ಬಸ್‌ನಡಿಗೆ ಬಿದ್ದ ದ್ವಿಚಕ್ರ ವಾಹನ – ಸವಾರ ಸ್ಥಳದಲ್ಲೇ ಮೃತ್ಯು..!


 ಚಾರ್ಮಾಡಿ ಘಾಟಿಯಲ್ಲಿ ಬಸ್‌ ಮತ್ತು ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಜೆ ಸಂಭವಿಸಿದೆ.

ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಗುಂಡಿ ನಿವಾಸಿ ಇರ್ಫಾನ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿದ್ದ ಇನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಧರ್ಮಸ್ಥಳದಿಂದ ಹರಪ್ಪನಹಳ್ಳಿಗೆ ಹೋಗುತ್ತಿದ್ದ ಬಸ್ ಮತ್ತು ಉಜಿರೆ ಕಡೆ ಬರುತ್ತಿದ್ದ ದ್ವಿಚಕ್ರ ವಾಹನ ನಡುವೆ ಢಿಕ್ಕಿ ಸಂಭವಿಸಿದೆ. ದ್ವಿಚಕ್ರ ವಾಹನ ಸವಾರ ಬಸ್ಸಿನ ಚಕ್ರದ ಅಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Powered by Blogger.