".

Header Ads

ಬಸ್ ಮತ್ತು ಬೈಕ್ ನಡುವೆ ಅಪಘಾತ – ಕಟಪಾಡಿಯ ಹೂವಿನ ವ್ಯಾಪಾರಿ ಸಾವು


 ಬಸ್ , ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕಟಪಾಡಿ ರಾಷ್ಟೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಮೃತರನ್ನು  ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ (32) ಎಂದು ಗುರುತಿಸಲಾಗಿದೆ.

ಹೂವಿನ ವ್ಯಾಪಾರ ನಡೆಸುತ್ತಿರುವ ಇವರು ಬೈಕ್ ನಲ್ಲಿ ಕಟಪಾಡಿ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿರುವ ಸಂದರ್ಭ ಖಾಸಗಿ ಬಸ್ ಬಂದು ಡಿಕ್ಕಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.



 ಕಾಪು ಪೊಲೀಸರು ಸ್ಥಳಕ್ಕಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Powered by Blogger.