".

Header Ads

ಉಡುಪಿ :ಖಾಸಗಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ:ಸಮಗ್ರ ತನಿಖೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ..!! 1000 ಕ್ಕೂ ಅಧಿಕ ಮಂದಿ ಪೊಲೀಸ್‌ ಬಂದೋಬಸ್ತ್‌



 ಉಡುಪಿಯ ಖಾಸಗಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ  ಪ್ರಕರಣವನ್ನು ಖಂಡಿಸಿ ಹಾಗೂ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ  ಎಸ್ಪಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

  ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ   ಬೃಹತ್‌ ಪ್ರತಿಭಟನೆ ನಡೆಯಿತು. ಈ ಹಿನ್ನೆಲೆ ಉಡುಪಿಯಲ್ಲಿ ಭಾರೀ ಪೊಲೀಸ್‌ ಬಂದೋಬಸ್ತ್‌ ಹಮ್ಮಿಕೊಳ್ಳಲಾಗಿತ್ತು. ಶಿವಮೊಗ್ಗ, ಹಾಸನ, ಕಾರವಾರ, ಮಂಗಳೂರು ಸೇರಿ ವಿವಿಧ ಕಡೆಯಿಂದ ಕೆಎಸ್‌ಆರ್‌ಪಿ ತುಕಡಿಗಳನ್ನು ಕರೆಸಿ, ಭದ್ರತೆಗೆ ನಿಯೋಜಿಸಲಾಗಿತ್ತು. 

ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ  ವೈದ್ಯಕೀಯ ಕಾಲೇಜಿನ ವಾಶ್‌ ರೂಮ್‌ನಲ್ಲಿ ಮೂವರು ವಿದ್ಯಾರ್ಥಿನಿಯರು ನಡೆಸಿದ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದ ವಿವಾದ ತಾರಕಕ್ಕೇರಿದೆ. 

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯ ಬಳಿಯಿಂದ ಹೊರಟ  ಪ್ರತಿಭಟನಾ ಮೆರವಣಿಗೆ’ ಉಡುಪಿ ಸಿಟಿ ಬಸ್ ನಿಲ್ದಾಣದ ಮೂಲಕ ಬನ್ನಂಜೆ ಎಸ್.ಪಿ. ಕಚೇರಿಯ ಬಳಿ . ‘ಪ್ರತಿಭಟನಾ ಸಭೆ’ ನಡೆಸಿ ‘ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸುವ ಮೂಲಕ ಮನವಿ’ಯನ್ನು ಸಲ್ಲಿಸಲಾಗುವುದು.


 

Powered by Blogger.