ಕೇರಳದಲ್ಲಿ ಅಧ್ಯಾಪಕರ ಕೈ ಕತ್ತರಿಸಿದ ದುಷ್ಕರ್ಮಿಗಳಿಗೆ 13 ವರ್ಷಗಳ ಬಳಿಕ ಶಿಕ್ಷೆ
ಕೇರಳದ ಇಡುಕ್ಕಿ ಜಿಲ್ಲೆಯ ತೊಡುಪುಳದ ನ್ಯೂಮನ್ ಕಾಲೇಜಿನ ವಾಣಿಜ್ಯ ವಿಷಯ ಪ್ರಾಧ್ಯಾಪಕರೊಬ್ಬರ ಕೈ ಕತ್ತರಿಸಿದ ಪ್ರಕರಣದಲ್ಲಿ ಆರು ಮಂದಿಯನ್ನು ದೋಷಿಗಳೆಂದು ಕೇರಳದ ವಿಶೇಷ ಎನ್‌ಐಎ ನ್ಯಾಯಾಲಯ ತೀರ್ಪು ನೀಡಿದೆ.
ನಿಷೇಧಿತ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರಾದ ಎಂ.ಕೆ. ನಾಸರ್, ಸಾಜಿಲ್, ನಜೀಬ್, ಎಂ.ಕೆ. ನೌಶಾದ್, ಪಿ.ಪಿ. ಮೊಹಮದ್ ಕುಂಜು ಮತ್ತು ಪಿ.ಎಂ. ಅಯೂಬ್
ಅವರುಗಳು ಈ ಕೃತ್ಯವೆಸಗಿದ್ದು, ಅವರನ್ನು ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿದೆ.
ಪ್ರೊ. ಟಿ.ಜೆ. ಜೋಸೆಫ್ ಅವರ ಕೈಯನ್ನು 2010ರ ಜುಲೈ 4ರಂದು ಕತ್ತರಿಸಲಾಗಿತ್ತು. ಬಿ.ಕಾಂ. ಸೆಮಿಸ್ಟರ್ ಪ್ರಶ್ನೆಪತ್ರಿಕೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ಪ್ರಶ್ನೆ ಕೇಳಲಾಗಿದೆ ಎಂಬ ಆರೋಪದ ಮೇಲೆ ಈ ಕೃತ್ಯ ಎಸಗಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು, 30 ಪ್ರಾಸಿಕ್ಯೂಷನ್ ಸಾಕ್ಷಿಗಳು, ನಾಲ್ವರು ಪರ ಸಾಕ್ಷಿಗಳ ವಿಚಾರಣೆ ನಡೆಸಿತ್ತು. ಅಂತಿಮವಾಗಿ ನ್ಯಾಯಾಲಯ 13 ಮಂದಿಯನ್ನು ಅಪರಾಧಿಗಳೆಂದು ಘೋಷಿಸಿತ್ತು.

Post a Comment