".

Header Ads

ಆಗುಂಬೆ ಘಾಟಿಯಲ್ಲಿ ಸೆಪ್ಟೆಂಬರ್ 15ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ..!!

 


ಮಲ್ಪೆಯಿಂದ ತೀರ್ಥಹಳ್ಳಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ಎಯ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಹಾಗೂ ಅದಕ್ಕೆ ಬದಲಿ ಮಾರ್ಗವನ್ನು ಸೂಚಿಸಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.ಉಡುಪಿ-ತೀರ್ಥಹಳ್ಳಿ ರಸ್ತೆಯ ಆಗುಂಬೆ ಘಾಟಿಯ 6, 7 ಹಾಗೂ 11ನೇ ತಿರುವಿನಲ್ಲಿ ಭಾರೀ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡುಬಂದಿದ್ದು, ಹೆಚ್ಚಿನ ಮಳೆಯಿಂದಾಗಿ ತಡೆಗೋಡೆಯು ಕುಸಿದಿರುವುದು ಕಂಡುಬಂದಿದೆ. ಹೀಗಾಗಿ ಈ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರ ಸೂಕ್ತವಲ್ಲ ಮತ್ತು ಇದರಿಂದ ರಸ್ತೆ ಮತ್ತಷ್ಟು ಕುಸಿದು ಅಪಘಾತದ ಸಂಭವವಿರುವುದರಿಂದ ತಾತ್ಕಾಲಿಕವಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸೆಪ್ಟೆಂಬರ್ 15ರವರೆಗೆ ಈ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಆದರೆ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

Powered by Blogger.