Home
>
Unlabelled
>
'ಎಣ್ಣೆ' ಪ್ರಿಯರಿಗೆ ಶಾಕಿಂಗ್ ನ್ಯೂಸ್: ಜು. 20 ರಿಂದ ಮದ್ಯ ದುಬಾರಿ; ಸಿಕ್ಸ್ಟಿಗೆ 20 ರೂ.ವರೆಗೆ ಹೆಚ್ಚಳ
'ಎಣ್ಣೆ' ಪ್ರಿಯರಿಗೆ ಶಾಕಿಂಗ್ ನ್ಯೂಸ್: ಜು. 20 ರಿಂದ ಮದ್ಯ ದುಬಾರಿ; ಸಿಕ್ಸ್ಟಿಗೆ 20 ರೂ.ವರೆಗೆ ಹೆಚ್ಚಳ
ವಿಸ್ಕಿ, ರಂ, ಬ್ರಾಂಡಿ, ಜಿನ್ ಸೇರಿದಂತೆ ಎಲ್ಲಾ ಬಗೆಯ ಭಾರತೀಯ ಮದ್ಯದ ಮೇಲೆ ಎಲ್ಲಾ ಘೋಷಿತ 18 ಸ್ಲ್ಯಾಬ್ ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಹಾಲಿ ಇರುವ ದರಕ್ಕಿಂತ ಶೇಕಡ 20ರಷ್ಟು ಹೆಚ್ಚಳವಾಗಲಿದೆ. ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಶೇಕಡ 10ರಷ್ಟು ಹೆಚ್ಚಳ ಮಾಡಲಿದ್ದು, ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಶೇಕಡ 175 ರಿಂದ ಶೇಕಡ 185ರಷ್ಟು ಹೆಚ್ಚಳವಾಗಲಿದೆ.
ಭಾರತೀಯ ಮದ್ಯ 60 ಎಂಎಲ್ ಒಂದು ಪೆಗ್ ಗೆ 10 ರಿಂದ 20 ರೂಪಾಯಿ ಹೆಚ್ಚಳ ಆಗಲಿದೆ. ಬಿಯರ್ ಬೆಲೆ ಪ್ರತಿ ಬಾಟಲ್ ಗೆ ಮೂರರಿಂದ ಐದು ರೂಪಾಯಿ ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ.
Post a Comment