".

Header Ads

ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಣೆ


 

ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 25 ರಂದು ಮಂಗಳವಾರ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಕೇರಳ, ಕರ್ನಾಟಕ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಅಲ್ಲಲ್ಲಿ ಮುಂದಿನ ಎರಡು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುತ್ತದೆ. ಇದಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ರಜೆ   ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Powered by Blogger.